ಮಂಡ್ಯ –
ಹಳೆ ಪಿಂಚಣಿ ಯೋಜನೆ ಯನ್ನು ನೀಡದಿದ್ದರೆ ಶಾಲಾ ಕಾಲೇಜುಗಳನ್ನು ಬಂದ್ ಮಾಡೊದಾಗಿ ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘದವರು ಎಚ್ಚರಿಕೆ ಸಂದೇಶ ನೀಡಿದ್ದಾರೆ ನೌಕರರಿಗೆ ಪಿಂಚಣಿ ಯೋಜನೆ ಜಾರಿ ಮಾಡಬೇಕು ಇಲ್ಲದಿದ್ದರೆ ರಾಜ್ಯದಾದ್ಯಂತ ಶಾಲಾ ಕಾಲೇಜು ಬಂದ್ ಮಾಡಿ ಪ್ರತಿಭಟನೆ ನಡೆಸ ಲಾಗುವುದು ಎಂದರು
ಶಾಲಾ ಶಿಕ್ಷಕರ ಸಂಘದ ಸದಸ್ಯರು ಎಚ್ಚರಿಸಿ ದರು.ಅನುದಾನಿತ ಶಾಲಾ-ಕಾಲೇಜುಗಳಲ್ಲಿ 2006 ನಂತರ ನೇಮಕಾತಿಯಾಗಿ ಆನಂತರ ವೇತನ ಅನುದಾನಕ್ಕೆ ಒಳಪಟ್ಟ ನೌಕರರಿಗೆ ಕರ್ನಾಟಕ ಖಾಸಗಿ ಶೈಕ್ಷಣಿಕ ಸಂಸ್ಥೆಗಳ ಸಿಬ್ಬಂದಿ (ವೇತನ, ನಿವೃತ್ತಿ ವೇತನ ಮತ್ತು ಇತರೆ ಸೌಲಭ್ಯ ಗಳ ನಿಯಂತ್ರಣ) ವಿಧೇಯಕ 2014ಕ್ಕೆ ತಿದ್ದುಪಡಿ ತಂದು ಅಥವಾ ರದ್ದುಪಡಿಸಿ ಜಾರಿಗೆ ಬರುವಂತೆ ಕ್ರಮವಹಿಸಬೇಕೆಂದು ಒತ್ತಾಯಿಸಿದರು
ಜಿಲ್ಲಾಧಿಕಾರಿ ಕಚೇರಿಯ ಗ್ರೇಡ್-2 ತಹಶೀಲ್ದಾರ್ ರೋಹಿಣಿ ಅವರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದರು.2006 ಏಪ್ರಿಲ್ 1ರ ಪೂರ್ವದಲ್ಲಿ ನೇಮಕವಾಗಿ ನಂತರ ಅನು ದಾನಕ್ಕೆ ಒಳಪಟ್ಟ ನೌಕರರ ಅನುದಾನಕ್ಕೂ ಪೂರ್ವದ ಸೇವೆಯನ್ನು ಕೇವಲ ಪಿಂಚಣಿ ಸೌಲಭ್ಯಕ್ಕೆ ಮಾತ್ರ ಪರಿಗಣಿಸಿ ‘ಹಳೆಯ ನಿಶ್ಚಿತ ಪಿಂಚಣಿ’ ಸೌಲಭ್ಯ ನೀಡುವುದು ಈಗಾಗಲೇ ಆಡಳಿತದಲ್ಲಿರುವ ತಮ್ಮ ಪಕ್ಷವು ತಮ್ಮ ಪ್ರಣಾಳಿ ಕೆಯಲ್ಲಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಎನ್‌ಪಿಎಸ್ ರದ್ದು ಗೊಳಿಸಿ ಒಪಿಎಸ್ ಜಾರಿಗೆ ತರುವ ಭರವಸೆ ಯನ್ನು ಸರ್ಕಾರ ನೀಡಿದೆ.
ನೀಡಿರುವ ಭರವಸೆಯಂತೆ ಶೀಘ್ರದಲ್ಲಿಯೇ ಹಳೆಯ ನಿಶ್ಚಿತ ಪಿಂಚಣಿ ಸೌಲಭ್ಯ ಜಾರಿಗೊ ಳಿಸಬೇಕೆಂದು ಒತ್ತಾಯಿಸಿದರು.ನಮ್ಮ ಬೇಡಿಕೆ ಗಳು ಈಡೇರಿಸಿದಿದ್ದರೆ ಸೆ. 5ರ ಶಿಕ್ಷಕರ ದಿನಾಚರ ಣೆಯ ಒಳಗಾಗಿ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಏಕಕಾಲಕ್ಕೆ ಶಾಲಾ ಕಾಲೇಜುಗಳನ್ನು ಬಂದ್ ಮಾಡಿ ಬೆಂಗಳೂರಿನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗು ವುದು ಎಂದು ಎಚ್ಚರಿಕೆ ನೀಡಿದರು.ಸಂಘದ ಪದಾಧಿಕಾರಿಗಳಾದ ಶಿವಣ್ಣ ಮಂಗಲ, ಬಲ್ಲೇನ ಹಳ್ಳಿ ಮಂಜುನಾಥ್, ಡಿ.ಎಂ.ಜಗದೀಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸುದ್ದಿ ಸಂತೆ ನ್ಯೂಸ್ ಮಂಡ್ಯ…..