ಬೆಳಗಾವಿ –
ಒಂದೇ ಕುಟುಂಬ ನಾಲ್ಕು ಜನರು ವಿಷ ಸೇವನೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯ ರಾಮದುರ್ಗ ದಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ಇಂದು ಅಂದರೆ ಮಂಗಳವಾರ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಒಂದೇ ಕುಟುಂಬದ ನಾಲ್ವರು.

ಪ್ರವೀಣ ರಮೇಶ ಶೆಟ್ಟರ್ (37), ಪತ್ನಿ ರಾಜೇಶ್ವರಿ (27), ಮಕ್ಕಳಾದ ಅಮೃತಾ (8), ಅದ್ವಿಕ್ (6) ಮೃತರಾಗಿದ್ದಾರೆ.ಎಲ್ಲರೂ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ.

ಇನ್ನೂ ವಿಷಯ ತಿಳಿದ ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ, ಸಿ.ಪಿ.ಐ ಶಶಿಕಾಂತ ವರ್ಮಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕೀಟನಾಶ ಅಂಗಡಿಯೊಂದನ್ನು ಇಟ್ಟುಕೊಂಡಿದ್ದರು. ರಾಮದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸಾವಿಗೆ ಕಾರಣವನ್ನು ಪೊಲೀಸರು ಹುಡುಕುತ್ತಿದ್ದಾರೆ.