ಕಡಬ –
ಶಾಲೆಯಲ್ಲಿ ಅಡುಗೆ ಮಾಡುವ ಸಂದರ್ಭದಲ್ಲಿ ಗ್ಯಾಸ್ ಸೋರಿಕೆಯುಂಟಾಗಿ ಬೆಂಕಿ ಹೊತ್ತಿಕೊಂಡ ಘಟನೆ ಮಂಗಳೂರಿನ ಕಡಬ ಸಮೀಪಕ ನೂಜಿಬಾಳ್ತಿಲ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಎಂದಿನಂತೆ ಒಂದು ಕಡೆ ಶಾಲೆಯಲ್ಲಿ ಮಕ್ಕಳ ಕಲರವ ಮತ್ತೊಂದು ಕಡೆಗೆ ಮಕ್ಕಳಿಗಾಗಿ ಶಾಲೆಯಲ್ಲಿ ಅಡುಗೆ ತಯಾರಿಕಾ ಸಿಬ್ಬಂದಿಗಳು ಅಡುಗೆ ಮನೆಯಲ್ಲಿ ಅಡುಗೆ ತಯಾರಿಕೆಯಲ್ಲಿ ತೊಡಗಿದ್ದರು ಈ ಒಂದು ಸಮಯದಲ್ಲಿ ಏಕಾಎಕಿಯಾಗಿ ಗ್ಯಾಸ್ ಸೋರಿಕೆ ಉಂಟಾಗಿ ದೊಡ್ಡ ಪ್ರಮಾಣದಲ್ಲಿ ಬೆಂಕಿ ಹತ್ತಿಕೊಂಡಿತು.
ತಕ್ಷಣವೇ ಸ್ಥಳದಲ್ಲಿದ್ದವರು ಕಾರ್ಯ ಪ್ರವೃತ್ತರಾದ ಹಿನ್ನೆಲೆಯಲ್ಲಿ ಬಾರಿ ದುರಂತವೊಂದು ತಪ್ಪಿದಂತಾಗಿದೆ. ಕೊರೋನಾ ಹಿನ್ನೆಲೆ ಸೋಮವಾರದಿಂದ ರಾಜ್ಯಾದ್ಯಂತ ಶಾಲೆಗಳು ಆರಂಭವಾಗಿದೆ. ಎಲ್ಲಾ ಶಾಲೆಗಳಂತೆ ನೂಜಿ ಬಾಳ್ತಿಲ ಶಾಲೆಯಲ್ಲೂ ಅಡುಗೆ ಮಾಡುವ ಕೊಠಡಿಯಲ್ಲಿ ಗ್ಯಾಸ್ ಉರಿಸುವ ಸಂದರ್ಭ ಗ್ಯಾಸ್ ಸೋರಿಕೆಯಾಗಿ ಬೆಂಕಿ ತಗುಲಿದೆ. ತಕ್ಷಣವೇ ಅಡುಗೆ ಸಿಬ್ಬಂದಿಗಳು ಹಾಗೂ ಸ್ಥಳೀಯರು ಉಪಕರಣದ ಸಹಾಯದಿಂದ ಬೆಂಕಿ ನಂದಿಸಿ, ಹೆಚ್ಚಿನ ಅಪಾಯ ಸಂಭವಿಸದಂತೆ ಮಾಡಿದರು. ಸ್ಥಳಕ್ಕೆ ಶಿಕ್ಷಕರು,ಎಸ್.ಡಿ.ಎಂ.ಸಿ.ಸಮಿತಿ,ಪೋಷಕರು, ನೂಜಿಬಾ ಳ್ತಿಲ ಗ್ರಾ.ಪಂ. ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಒಟ್ಟಾರೆ ಸರ್ಕಾರಿ ಶಾಲೆ ಯಲ್ಲಿ ದೊಡ್ಡ ಪ್ರಮಾಣದಲ್ಲಿ ಅವಘಡವೊಂದು ತಪ್ಪಿದಂ ತಾಗಿದೆ.