ವಿಜಯನಗರ –
ಎರಡು ಬೈಕ್ ಗಳ ಮದ್ಯ ಮುಖಾ ಮುಖಿ ಡಿಕ್ಕಿ ಪೊಲೀಸ್ ಹೆಡ್ ಕಾನ್ಸಟೇಬಲ್ ಸ್ಥಳದಲ್ಲೇ ಸಾವಿಗೀಡಾದ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ.ವಿಜಯನಗರ ಜಿಲ್ಲೆ ಹೂವಿನ ಹಡಗಲಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಂ.ಶಿವಕುಮಾರಸ್ವಾಮಿಯೇ ಮೃತರಾದವರಾಗಿ ದ್ದಾರೆ.

ಕರ್ತವ್ಯ ಮುಗಿಸಿ ತನ್ನೂರು ಹೊಳಲು ಗ್ರಾಮಕ್ಕೆ ತೆರಳುವಾಗ ಈ ಒಂದು ಘಟನೆ ನಡೆದಿದೆ.ಹೂವಿನ ಹಡಗಲಿ ತಾಲೂಕಿನ ತಿಪಾಪುರ ಗ್ರಾಮದ ಬಳಿ ಅಪಘಾತ ನಡೆದಿದೆ.ಘಟನೆಯಲ್ಲಿ ಮತ್ತೊರ್ವ ವ್ಯಕ್ತಿಗೆ ಗಂಭೀರ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ತಲೆಗೆ ತೀವ್ರವಾಗಿ ಪೆಟ್ಟು ಬಿದ್ದ ಹಿನ್ನಲೆಯಲ್ಲಿ ಪೊಲೀಸ್ ಕಾನ್ಸಟೇಬಲ್ ಸಾವಿಗೆ ಪ್ರಮುಖ ಕಾರಣವಾಗಿದೆ.ಇಲಾಖೆಯಲ್ಲಿ ಕೆಲಸ ಮಾಡುವ ಪೇದೆಯೇ ಹೆಲ್ಮೆಟ್ ಹಾಕದೆ ಬೈಕ್ ಚಲಾಯಿಸಿದ್ದು ಸಾವಿಗೆ ಪ್ರಮುಖ ಕಾರಣವಾಗಿದೆ.