ನೆಲಮಂಗಲ –
ಇವರೊಬ್ಬರು ಡಬಲ್ ಗ್ರ್ಯಾಜುವೇಟ್ ಕೆಎಎಸ್ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದಕ್ಕೆ ಬೇಸರ ಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಹೌದು ಇಂಥದೊಂದು ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ವಿಜಯನಗರ ಬಡಾವಣೆ ಯಲ್ಲಿ ನಡೆದಿದೆ.

ಚಿಂತಾಮಣಿ ತಾಲ್ಲೂಕು ಟಿ. ದೇವಪಲ್ಲಿ ಮೂಲದ ಡಿ.ಎಸ್.ಮೀನಾ (42) ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದಾರೆ.ಎಂಎ ಪದವೀಧರೆ ಆಗಿರುವ ಇವರು 18 ವರ್ಷಗಳ ಹಿಂದೆ ಲಚ್ಚಿ ರೆಡ್ಡಿ ಎಂಬುವ ರೊಂದಿಗೆ ವಿವಾಹವಾಗಿದ್ದರು.ಇವರು ಕಾಲೇಜೊಂ ದರಲ್ಲಿ ಕನ್ನಡ ವಿಭಾಗದಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಕೆಎಎಸ್ ಪರೀಕ್ಷೆ ಬರೆದಿದ್ದ ಮೀನಾ,ಆ ಪರೀಕ್ಷೆಯಲ್ಲಿ ಅನುತ್ತೀರ್ಣ ಗೊಂಡಿರುವುದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ದ್ದರು.ಹೀಗಾಗಿ ಯಾರೂ ಇಲ್ಲದ ಸಂದರ್ಭದಲ್ಲಿ ಮನೆ ಮೇಲಿನ ಶೆಡ್ ನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ