ಹಾಸನ –
ಕೆಇಬಿ ನೌಕರರೊಬ್ಬರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಹಾಸನ ತಾಲೂಕಿನ ಹೂವಿನಹಳ್ಳಿ ಕಾವಲು ಬಳಿ ಶನಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಅರೇಕಲ್ಲು ಹೊಸಳ್ಳಿ ಗ್ರಾಮದ ಸಂತೋಷ್ (36) ಕೊಲೆಯಾದ ವ್ಯಕ್ತಿ. ಹೂವಿನಹಳ್ಳಿ ಕಾವಲು ಬಳಿ ಹೊಲದಲ್ಲಿ ಸಂತೋಷ್ ಮೃತದೇಹ ಪತ್ತೆಯಾಗಿದೆ.

ಸ್ನೇಹಿತರೊಂದಿಗೆ ಪಾರ್ಟಿ ಮಾಡುತ್ತಿದ್ದಾಗ ಕೊಲೆ ನಡೆದಿದೆ ಎನ್ನಲಾಗುತ್ತಿದ್ದು, ಶವ ಪತ್ತೆಯಾದ ಸ್ಥಳದಲ್ಲಿ ಮಧ್ಯದ ಬಾಟಲಿಗಳು, ಚಿಪ್ಸ್, ಊಟದ ಪಾರ್ಸಲ್ ಇರುವುದು ಕಂಡು ಬಂದಿದೆ.

ವಿಷಯ ತಿಳಿದ ಡಿವೈಎಸ್ಪಿ ಪುಟ್ಟಸ್ವಾಮಿಗೌಡ, ಗ್ರಾಮಾಂತರ ಪೊಲೀಸ್ ಠಾಣೆ ಸಬ್ ಇನ್‍ಸ್ಪೆಕ್ಟರ್ ಸುರೇಶ್ ಕುಮಾರು ಹಾಗೂ ಸಿಬ್ಬಂದಿಗಳು ಶೂಟೌಟ್ ಮಾಡಿದ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ, ಪ್ರಕರಣ ದಾಖಲಿಸಿ ತನಿಖೆ ಚುರುಕುಗೊಳಿಸಿದ್ದಾರೆ.