ತುಮಕೂರು –
ಶಾಲೆಯಲ್ಲಿ ಬಿಸಿಯೂಟ ತಯಾರಿಸುವಾಗ ಕುಕ್ಕರ್ ಸ್ಪೋಟ ಗೊಂಡ ಘಟನೆ ತುಮಕೂರಿನಲ್ಲಿ ನಡೆದಿದೆ ಹೌದು ಘಟನೆ ಯಲ್ಲಿ ಅಡುಗೆ ಸಹಾಯಕಿಯರಿಗೆ ಗಾಯಗೊಂಡಿದ್ದಾರೆ.ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಪುರವರ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿಸುವಾಗ ಕುಕ್ಕರ್ ಸ್ಪೋಟ ವಾಗಿದೆ
ಅಡುಗೆ ಸಹಾಯಕಿಯರಿಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಲೆಯಲ್ಲಿ ಮಧ್ಯಾಹ್ನ ಬಿಸಿಯೂಟ ತಯಾರಿಸುವಾಗ ಕುಕ್ಕರ್ ಸ್ಫೋಟವಾಗಿದೆ ಅಡುಗೆ ಸಹಾಯಕಿ ಉಮಾದೇವಿ ಸ್ಥಿತಿ ಗಂಭೀರವಾ ಗಿದ್ದು, ಜಯಮ್ಮ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಉಮಾದೇವಿ ಅವರನ್ನು ಮಧುಗಿರಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಣಮಟ್ಟದ ಕುಕ್ಕರ್ ನೀಡದಿರು ವುದೇ ಘಟನೆಗೆ ಕಾರಣವೆಂದು ಆರೋಪಿಸಲಾಗಿದೆ. ಸ್ಥಳಕ್ಕೆ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಹೆಚ್ಚಿನ ಮಾಹಿತಿ ಕಲೆಹಾಕಿದ್ದಾರೆ
ಸುದ್ದಿ ಸಂತೆ ನ್ಯೂಸ್ ತುಮಕೂರು…..