ಉತ್ತರ ಪ್ರದೇಶ –
ಉತ್ತರ ಪ್ರದೇಶದ ಕೌಶಾಂಬಿ ಜಿಲ್ಲೆಯಲ್ಲೊಂದು ಭೀಕರ ಅಪಘಾತವಾಗಿದೆ . ಬೆಳ್ಳಂ ಬೆಳಿಗ್ಗೆ ಈ ಒಂದು ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಎಂಟು ಜನರು ಸಾವಿಗೀಡಾಗಿದ್ದಾರೆ.ಉತ್ತರ ಪ್ರದೇಶದಲ್ಲಿ ಬೆಳಗ್ಗೆ ಭೀಕರ ಅಪಘಾತವಾಗಿದೆ. ಮರಳು ತುಂಬಿದ ಲಾರಿಯೊಂದು ಕಾರಿನ ಮೇಲೆ ಮುಗುಚಿ ಬಿದ್ದಿದೆ.ಪರಿಣಾಮ ಕಾರಿನಲ್ಲಿದ್ದ 8 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಈ ಘಟನೆ ಉತ್ತರ ಪ್ರದೇಶದ ಕೌಸಂಭಿ ಜಿಲ್ಲೆಯಲ್ಲಿ ನಡೆದಿದೆ.10 ಜನರು ಸ್ಕಾರ್ಪಿಯೋ ವಾಹನದಲ್ಲಿ ಮದುವೆ ಮುಗಿಸುಕೊಂಡು ವಾಪಸ್ ಬರುತ್ತಿದ್ದ ವೇಳೆ ರಸ್ತೆ ಬದಿಯಲ್ಲಿ ಕಾರು ನಿಲ್ಲಿಸಲಾಗಿತ್ತು.ಈ ವೇಳೆ ಮರಳು ತುಂಬಿದ್ದ ಲಾರಿ ಕಾರಿನ ಮೇಲೆ ಮುಗುಚಿ ಬಿದ್ದಿದೆ. ರಸ್ತೆ ಪಕ್ಕದಲ್ಲಿಯೇ ನಿಲ್ಲಿಸಲಾಗಿದ್ದ ಸ್ಕಾರ್ಪಿಯೋ ಮೇಲೆ ಲಾರಿ ಬೀದಿದ್ದು ಪರಿಣಾಮ ಘಟನೆಯಲ್ಲಿ ಸ್ಥಳದಲ್ಲೇ 7 ಮಂದಿ ಸಾವನ್ನಪ್ಪಿದ್ದು, ಓರ್ವ ಮಹಿಳೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇನ್ನೂ ಈ ಒಂದು ವಿಷಯ ತಿಳಿದ ಕೌಶಾಂಬಿಯ ಸ್ಥಳೀಯ ಪೊಲೀಸರು ಸ್ಥಳಕ್ಕೇ ಭೇಟಿ ನೀಡಿ ಪರಿಶೀಲನೆ ಮಾಡಿದರು. ಅಲ್ಲದೇ ಈ ಕುರಿತು ಪ್ರಕರಣವನ್ನು ದಾಖಲು ಮಾಡಿಕೊಂಡು ತನಿಖೆ ಮಾಡ್ತಾ ಇದ್ದಾರೆ.