ಧಾರವಾಡ –
ಧಾರವಾಡದಲ್ಲಿ ಫೆಬ್ರವರಿ 6, 7 ಮತ್ತು 8 ರಂದು ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳ ಆಯೋಜನೆ ಪ್ರಭಾರ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ನೇತೃತ್ವದಲ್ಲಿ ಪೂರ್ವ ಭಾವಿ ಸಭೆ ಹೌದು ಶಾಲಾ ಶಿಕ್ಷಣ ಇಲಾಖೆಯ 2023 ಮತ್ತು 2024 ನೇ ಸಾಲಿನ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳನ್ನು ಧಾರವಾಡದಲ್ಲಿ ಆಯೋಜಿಸಲಾ ಗುತ್ತಿದೆ
ಬರುವ ಫೆಬ್ರವರಿ 6, 7 ಮತ್ತು 8 ರಂದು ಸಂಘ ಟಿಸಲು ತಾತ್ಕಾಲಿಕವಾಗಿ ದಿನಾಂಕಗಳನ್ನು ನಿಗದಿ ಗೊಳಿಸಲಾಗಿದೆ ಎಂದು ಪ್ರಭಾರ ಜಿಲ್ಲಾಧಿಕಾರಿಗ ಳು ಆಗಿರುವ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ. ಅವರು ತಿಳಿಸಿದರು.
ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ರಾಜ್ಯ ಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆಗಳ ಆಯೋ ಜನೆ ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.
ಪ್ರಥಮ ಬಾರಿಗೆ ಧಾರವಾಡ ಜಿಲ್ಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳನ್ನು ಸಂಘಟಿಸಲಾಗುತ್ತಿದೆ. ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ 13 ಸಮಿತಿಗಳನ್ನು ರಚಿಸಲಾಗಿದೆ. ಪ್ರತಿ ಸಮಿತಿಗೆ ಹಿರಿಯ ಅಧಿಕಾರಿಗಳ ಅಧ್ಯಕ್ಷತೆ ಯಲ್ಲಿ ಅಧಿಕಾರಿ, ಸಿಬ್ಬಂದಿಗಳನ್ನು ನೇಮಿಸಿ, ಕಾರ್ಯ ಹಂಚಿಕೆ ಮಾಡಲಾಗಿದೆ.
ತಮಗೆ ನೀಡಿದ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವ ಮೂಲಕ ಕಾರ್ಯಕ್ರಮ ಯಶಸ್ವಿ ಗೊಳಿಸಬೇಕೆಂದು ಅವರು ಹೇಳಿದರು.ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ 23 ವೈಯಕ್ತಿಕ ಸ್ಪರ್ಧೆಗಳನ್ನು ಮತ್ತು 03 ಸಾಮೂಹಿಕ ಸ್ಪರ್ಧೆಗಳನ್ನು ಸಂಘಟಿಸಲಾಗುತ್ತಿದೆ.
ಧಾರವಾಡ ಸೇರಿದಂತೆ ರಾಜ್ಯದ ಎಲ್ಲ ಶೈಕ್ಷಣಿಕ ಜಿಲ್ಲೆಗಳಿಂದ ಒಟ್ಟು 1750 ಸ್ಪರ್ಧಾಳುಗಳು ಭಾಗವಹಿಸಲಿದ್ದಾರೆ. ಸ್ಪರ್ಧಾಳುಗಳು, ತಿರ್ಪು ಗಾರರು ಮತ್ತು ಆಗಮಿಸುವ ಅಧಿಕಾರಿಗಳಿಗೆ ಅಗತ್ಯವಿರುವ ಉಪಹಾರ, ಊಟ, ವಸತಿ ವ್ಯವಸ್ಥೆಯನ್ನು ಮಾಡಲಾಗಿದೆ.
ಸ್ಪರ್ಧೆ ನಡೆಯುವ ಸ್ಥಳಗಳಿಗೆ ಸಾರಿಗೆ ವ್ಯವಸ್ಥೆ, ಇತರ ಜಿಲ್ಲೆಯ ಸ್ಫರ್ಧಾಳುಗಳಿಗೆ ಸರಿಯಾದ ಮಾಹಿತಿ ನೀಡಲು ಮತ್ತು ತಕ್ಷಣದ ಸಂಹವನ ಕ್ಕಾಗಿ ಹೆಲ್ಪ್‍ಡೆಸ್ಕ್ ತೆರೆಯಲಾಗುತ್ತದೆ ಮತ್ತು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುತ್ತದೆ ಎಂದು ಅವರು ಹೇಳಿದರು.
ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಎಸ್.ಎಸ್.ಕೆಳದಿಮಠ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಪ್ರತಿ ಜಿಲ್ಲೆಯಿಂದ 50 ಸ್ಪರ್ಧಾಳು ಗಳು, ವಿವಿಧ ಸ್ಪರ್ಧೆಗಳ ತಿರ್ಪುಗಾರರಾಗಿ ಒಟ್ಟು 78 ಜನ ಕ್ರೀಡಾತಜ್ಞರು ಭಾಗವಹಿಸಲಿದ್ದಾರೆ.
ಪ್ರತಿ ಜಿಲ್ಲೆಯಿಂದ ಮಕ್ಕಳೊಂದಿಗೆ ಒಬ್ಬ ನೋಡಲ್ ಅಧಿಕಾರಿ ಹಾಗೂ ಇಬ್ಬರು ಮೇಲ್ವಿಚಾರಕ ಶಿಕ್ಷಕರು ಆಗಮಿಸಲಿದ್ದು, 35 ಶೈಕ್ಷಣಿಕ ಜಿಲ್ಲೆಗಳಿಂದ ಒಟ್ಟು 105 ಶಿಕ್ಷಕರು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.
ಜಿಲ್ಲಾವಾರು ಸ್ಪರ್ಧಾಳುಗಳು ಹಾಗೂ ನೋಡಲ್ ಅಧಿಕಾರಿಗಳ ನೋಂದಣಿಯನ್ನು ಆನ್‍ಲೈನ್ ಮೂಲಕ ಮಾಡಿಕೊಳ್ಳಲು ಈಗಾಗಲೇ ಕ್ರಮಕೈ ಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಜನಪ್ರತಿ ನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, 10 ಜನ ವಿವಿಧ ಸಂಘಸಂಸ್ಥೆಗಳ ಅಧ್ಯಕ್ಷರು, 1750 ಸ್ಪರ್ಧಾಳುಗಳು, 105 ಜನ ಮೇಲ್ವಿಚಾರಕರು, 78 ತಿರ್ಪುಗಾರರು, 105 ಜನ ಮಾರ್ಗದರ್ಶಿ ಶಿಕ್ಷಕರು, 200 ಜನ ವಿವಿಧ ಸಮಿತಿಗಳ ನೋಡಲ್ ಅಧಿ ಕಾರಿಗಳು ಮತ್ತು ಸದಸ್ಯರು ಸೇರಿದಂತೆ ಇಡೀ ಕಾರ್ಯಕ್ರಮದಲ್ಲಿ ಅಂದಾಜು 2,273 ಜನರು ಭಾಗವಹಿಸಲಿದ್ದು, ಅಗತ್ಯ ಸಿದ್ದತೆಯನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಉಪನಿರ್ದೇಶಕ ಎಸ್.ಎಸ್.ಕೆಳದಿಮಠ ಅವರು ಸಭೆಯಲ್ಲಿ ತಿಳಿಸಿದರು.
ವೇದಿಕೆಯಲ್ಲಿದ್ದ ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕಿ ಮಮತಾ ನಾಯಕ್, ಸಹಾಯಕ ಪೆÇಲೀಸ್ ಆಯುಕ್ತ ಪ್ರಶಾಂತ ಸಿದ್ದನಗೌಡರ ಮಾತನಾಡಿದರು. ಉಪಯೋಜನಾ ಸಮನ್ವ ಯಾಧಿಕಾರಿ ಎಸ್.ಎಂ.ಹುಡೆದಮನಿ ಸಭೆ ನಿರ್ವಹಿಸಿ, ವಿಷಯ ಪ್ರಸ್ತಾಪಿಸಿದರು.
ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಡಿವೈಪಿಸಿ ಜಿ.ಎನ್.ಮಠಪತಿ, ಹುಬ್ಬಳ್ಳಿ ಗ್ರಾಮೀಣ ಬಿಇಓ ಉಮೇಶ ಬೊಮ್ಮಕ್ಕನವರ, ಶಹರ ಬಿಇಓ ಚನ್ನಪ್ಪಗೌಡರ, ಧಾರವಾಡ ಬಿಇಓ ರಾಮಕೃಷ್ಣ ಸದಲಗಿ, ಆರೋಗ್ಯ ಇಲಾಖೆಯ ಡಾ.ಮಂಜು ನಾಥ ಸೊಪ್ಪಿಮಠ,
ರಾಜ್ಯ ಸರಕಾರಿ ನೌಕರ ಸಂಘದ ಜಿಲ್ಲಾ ಅಧ್ಯಕ್ಷ ಎಸ್.ಎಫ್.ಸಿದ್ದನಗೌಡರ, ಕಾರ್ಯದರ್ಶಿ ಮಂಜುನಾಥ ಯಡಹಳ್ಳಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ವಿ.ಎಫ್. ಚುಳಕಿ, ಕಾರ್ಯದರ್ಶಿ ರಾಜಶೇಖರ ಹೊನ್ನಪ್ಪನವರ, ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಎಫ್.ವಿ.ಮಂಜಣ್ಣವರ,
ಜನತಾ ಶಿಕ್ಷಣ ಸಮಿತಿ ಐಟಿಐ ಕಾಲೇಜ ಪ್ರಾಚಾರ್ಯ ಮಹಾವೀರ ಉಪಾಧ್ಯಾಯ, ಅನುದಾನಿತ ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹುದ್ದಾರ ಅವರು ಕಾರ್ಯ ಕ್ರಮದ ಯಶಸ್ವಿ ಸಂಘಟನೆಗೆ ಅಗತ್ಯವಿರುವ ಮೂಲಭೂತಸೌಕರ್ಯಗಳ ಕುರಿತು ಮಾತ ನಾಡಿದರು.ಸಭೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.
ಸುದ್ದಿ ಸಂತೆ ನ್ಯೂಸ್ ಧಾರವಾಡ…..