ಬೆಂಗಳೂರು –
ರಾಜ್ಯ ಸರ್ಕಾರವು ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಹೊಸ ಪ್ಲ್ಯಾನ್ ಮಾಡಿದ್ದು ಸರ್ಕಾರಿ ಶಾಲಾ ಕಾಲೇಜುಗಳನ್ನು ಶೈಕ್ಷಣಿಕವಾಗಿ ದತ್ತು ಪಡೆದು ಅಭಿವೃದ್ಧಿ ಪಡಿಸಲು ಸರ್ಕಾರಿ ಅಧಿಕಾರಿಗಳಿಗೆ ಜವಾಬ್ದಾರಿ ನೀಡಿ ಆದೇಶ ಹೊರಡಿಸಿದೆ.ರಾಜ್ಯ ಸರ್ಕಾರದ ಶೈಕ್ಷಣಿಕ ದತ್ತು ಕಾರ್ಯಕ್ರಮ ದಡಿ ಸರ್ಕಾರಿ ಅಧಿಕಾರಿಗಳು ತಮ್ಮ ಭಾಗದ ಸರ್ಕಾರಿ ಶಾಲಾ,ಕಾಲೇಜುಗಳನ್ನು ದತ್ತು ಪಡೆದು ಶೈಕ್ಷಣಿಕ ಗುಣಮಟ್ಟವನ್ನ ಹೆಚ್ಚಿಸಬೇಕು.ರಾಜ್ಯ ಜಿಲ್ಲಾ,ತಾಲೂಕು ಮಟ್ಟದ ಎಲ್ಲಾ ಹಂತದ ಅಧಿಕಾರಿಗಳು ಸರ್ಕಾರಿ ಶಾಲೆಗ ಳನ್ನು ದತ್ತು ತೆಗೆದುಕೊಳ್ಳಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಶಾಲಾ ಶಿಕ್ಷಣ ಇಲಾಖೆಯನ್ನೊಳಗೊಂಡಂತೆ ಸರ್ಕಾರದ ಎಲ್ಲ ಇಲಾಖೆಗಳ ರಾಜ್ಯ ಜಿಲ್ಲಾ ಮತ್ತು ತಾಲೂಕು ಹಂತದ ಅಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿಗೆ ಸೇರಿದ ಒಂದು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ,ಹಿರಿಯ ಪ್ರಾಥಮಿಕ ಶಾಲೆ,ಪ್ರೌಢಶಾಲೆ,ಪದವಿ-ಪೂರ್ವ ಕಾಲೇಜನ್ನು ದತ್ತು ಪಡೆ ಯಬೇಕು.ಈ ಮೂಲಕ ಅಧಿಕಾರಿಗಳು ತಾವು ದತ್ತು ಪಡೆದ ಶಾಲೆ,ಕಾಲೇಜಿಗೆ ಭೇಟಿ ನೀಡಿ ಶಾಲೆ,ಕಾಲೇಜುಗಳ ಶೈಕ್ಷಣಿಕ ಪ್ರಗತಿಯನ್ನು ಅವಲೋಕಿಸಿ ಮಾರ್ಗದರ್ಶನ ನೀಡುವಂತೆ ಸೂಚನೆ ನೀಡಲಾಗಿದೆ.