ಕಲಬುರಗಿ –
ಕೋವಿಡ್ ಸೋಂಕಿತ ವ್ಯಕ್ತಿ ನರಳಿ ನರಳಿ ಕೊನೆಯು ಸಿರೆಳಿದ್ದದನ್ನು ಕಂಡು ಪಕ್ಕದ ಬೆಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹೆಡ್ ಕಾನ್ಸ್‌ಟೇಬಲ್ ವೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಕಲಬುರಗಿ ಯಲ್ಲಿ ನಡೆದಿದೆ. ನಗರದ ಜಿಮ್ಸ್ ಆಸ್ಪತ್ರೆ ಯ ಕೋವಿಡ್ ವಾರ್ಡ್ ನಲ್ಲಿ ಈ ಒಂದು ಘಟನೆ ನಡೆದಿದೆ. ಆನಂದ್ ಪ್ರಸಾದ್ ಹೃದಯಾಘಾತದಿಂದ ಮೃತಪಟ್ಟ ಪೊಲೀಸ್ ಪೇದೆಯಾಗಿದ್ದಾರೆ.
ನಿಮೋನಿಯಾದಿಂದ ಬಳಲುತ್ತಿದ್ದ ಇವರಿಗೆ ಕೋವಿ ಡ್ ಸೋಂಕು ತಗುಲಿರುವ ಶಂಕೆ ಹಿನ್ನೆಲೆ ಕೋವಿಡ್ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು ಇದೇ ವಾರ್ಡ ನಲ್ಲಿ ಎರಡು ದಿನಗಳ ಹಿಂದೆ ಇವರ ಪಕ್ಕದ ಬೆಡ್ ನಲ್ಲಿದ್ದ ಕೊರೊನಾ ಸೋಂಕಿತ ನರಳಿ ನರಳಿ ಮೃತ ಪಟ್ಟಿದ್ದ. ಇದನ್ನು ಕಂಡ ಆನಂದ್ ಪ್ರಸಾದ್ ಆತಂಕ ಕ್ಕೆ ಒಳಗಾಗಿದ್ದರು.
ಕುಟುಂಬಸ್ಥರಿಗೆ ಕರೆ ಮಾಡಿ ನನಗೂ ಇಂತಹ ಸಾವು ಬರಬಹುದು ಎಂದು ಆತಂಕ ವ್ಯಕ್ತಪಡಿಸಿದ್ದರು. ಪಕ್ಕದ ಬೆಡ್ನಲ್ಲಿದ್ದ ವ್ಯಕ್ತಿ ಮೃತಪಟ್ಟ ಬಳಿಕ ನೊಂದಿದ್ದ ಆನಂದ್ ಪ್ರಸಾದ್ ಕೋವಿಡ್ ವರದಿ ನೆಗೆಟಿವ್ ಬಂದರೂ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ