ಹುಬ್ಬಳ್ಳಿ –
ಹುಬ್ಭಳ್ಳಿ – ಪೊಲೀಸ್ ಅರ್ಹತಾ ಪರೀಕ್ಷೆಯಲ್ಲಿ ಪೊಲೀಸ್ ಪೇದೆಯೋರ್ವ ಬೇರೆ ಅಭ್ಯರ್ಥಿಯ ಪರವಾಗಿ ಪರೀಕ್ಷೆ ಬರೆಯಲು ಹೋಗಿ ಸಿಕ್ಕಿ ಬಿದ್ದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ನಗರದ ಕೆಎಲ್ ಇ ಪರೀಕ್ಷಾ ಕೇಂದ್ರದಲ್ಲಿ ಬೇರೆ ಅಭ್ಯರ್ಥಿಯ ಪರವಾಗಿ ಅಡಿವೆಪ್ಪ ಯರಗುಪ್ಪಿ ಪರೀಕ್ಷೆ ಬರೆಯಲು ಬಂದಿದ್ದರು .ಸಂಶಯಗೊಂಡ ಪೊಲೀಸ್ ಅಧಿಕಾರಿಗಳು ಪರಿಶೀಲನೆ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.ಇನ್ನೂ ಬೇರೆಯವರ ಬದಲಿಗೆ ಪರೀಕ್ಷೆ ಬರೆಯಲು ಬಂದವರು ಸಧ್ಯ ಬೆಳಗಾವಿ ಜಿಲ್ಲೆಯ ಅಂಕಲಗಿ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಪೇದೆಯಾಗಿದ್ದಾರೆ. ಇವರೇ ಬೇರೆ ಅಭ್ಯರ್ಥಿಯರ ಪರವಾಗಿ ಪರೀಕ್ಷೆ ಬರೆಯಲು ಹೋಗಿ ಸಿಲುಕಿಕೊಂಡಿದ್ದಾರೆ.ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ನಗರದ ಗೋಕುಲ ಪೊಲೀಸ್ ಠಾಣೆ ವ್ಯಾಪ್ತಿಯ ಪರೀಕ್ಷಾ ಕೇಂದ್ರದಲ್ಲಿ ಬೇರೆ ಅಭ್ಯರ್ಥಿಯ ಹೆಸರಿನಲ್ಲಿ ಪರೀಕ್ಷೆ ಬರೆಯುತ್ತಿದ್ದನು. ರಾಯಭಾಗ ಮೂಲದ ಮಣಿಕಂಠ ಎಂಬ ಅಭ್ಯರ್ಥಿ ಹೆಸರಿನಲ್ಲಿ ಹಾಜರಾಗಿದ್ದನು.
ಖಚಿತ ಮಾಹಿತಿಯ ಮೇರೆಗೆ ನೂತನವಾಗಿ ಅವಳಿನಗರಕ್ಕೆ ಆಗಮಿಸಿರುವ ಡಿಸಿಪಿ ಕೆ.ರಾಮರಾಜನ್ ಸೂಚನೆಯಂತೆ ಕಾರ್ಯಾಚರಣೆ ನಡೆದಿದ್ದು ಸುಮಾರು ಒಂದು ಗಂಟೆಯ ಹುಡುಕಾಟದ ನಂತರ ಸಿಕ್ಕಿಬಿದ್ದಿದ್ದಾನೆ ಪೋಲಿಸಪ್ಪ. ಇನ್ಸಪೆಕ್ಟರ್ ಸುರೇಶ ಕುಂಬಾರ ನೇತೃತ್ವದಲ್ಲಿ ಆರೋಪಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಪೊಲೀಸ್ ಅರ್ಹತಾ ಪರೀಕ್ಷೆಯಲ್ಲಿ ಬೇರೆಯವರ ಹೆಸರಿನಲ್ಲಿ ಪೊಲೀಸನೋರ್ವ ಪರೀಕ್ಷೆ ಬರೆಯುತ್ತಿದ್ದಾನೆಂಬ ಮಾಹಿತಿ, ಡಿಸಿಪಿಯವರಿಗೆ ಲಭಿಸಿದ್ದು, ಆ ಆಧಾರದ ಮೇಲೆ ಡಿಸಿಪಿ ಕೆ.ರಾಮರಾಜನ ಎರಡು ಮೂರು ತಂಡಗಳನ್ನು ಮಾಡಿ ಸೂಚನೆ ನೀಡಿದರು. ಬೆಳಿಗ್ಗೆ ಪರೀಕ್ಷೆ ಆರಂಭವಾಗುತ್ತಿದ್ದಂತೆ ಹುಡುಕಾಟ ಆರಂಭಿಸಿ, ಕೊನೆಗೆ ನಕಲಿ ಕ್ಯಾಂಡಿಟೇಟ್ ನ ಅಸಲಿ ಬಣ್ಣವನ್ನ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಪೊಲೀಸರ ವಶದಲ್ಲಿರುವ ನಕಲಿ ಅಭ್ಯರ್ಥಿಯಾಗಿರುವ ಪೊಲೀಸ್ ನಿಂದ ಮಾಹಿತಿ ಕಲೆ ಹಾಕಲಾಗುತ್ತಿದೆ.