ಧಾರವಾಡ –
ದಾಂಡೇಲಿ ಬಳಿ ನಡೆದ ಅಪಘಾತದಲ್ಲಿ ಮೃತರಾದ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಇಬ್ಬರು ಮಹಿಳಾ ನೌಕರರ ಸಾವಿನ ವಿಚಾರ ಕುರಿತು ಧಾರವಾಡದಲ್ಲಿ ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಮುಖಂಡರು ಪ್ರತಿಭಟನೆ ಮಾಡಿದರು.
ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಪ್ರತಿಭಟನೆ ಮಾಡಿದರು. ಪ್ರತಿಭಟನೆ ಮುನ್ನ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದರು
ನಂತರ ಶಾಂತಿಯುತವಾಗಿ ಪ್ರತಿಭಟನೆ ಮಾಡಿದರು. ಇದೇ ವೇಳೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಸಚಿವ ಬಿ ಸಿ ಪಾಟೀಲ್ ಅವರಿಗೆ ಮುತ್ತಿಗೆ ಹಾಕಿದರು.
ಇದೇ ವೇಳೆ ಅಪಘಾತದಲ್ಲಿ ಸಾವಿಗೀಡಾದ ಇಬ್ಬರು ಮಹಿಳೆಯರ ಸಾವಿನ ಹಿಂದೆ ಸಾಕಷ್ಟು ಪ್ರಮಾಣ ದಲ್ಲಿ ಅನುಮಾನಗಳು ಹುಟ್ಟಿಕೊಂಡಿದ್ದು ಕೂಡಲೇ ಈ ಒಂದು ಪ್ರಕರಣವನ್ನು ಸಿಐಡಿ ಗೆ ಕೊಡುವಂತೆ ಒತ್ತಾಯವನ್ನು ಮಾಡಿದರು.
ಪ್ರತಿಭಟನಾಕಾರರ ಮನವಿಗೆ ಸ್ಪಂದಿಸಿದ ಸಚಿವ ಬಿ ಸಿ ಪಾಟೀಲ್ ಸೂಕ್ತ ತನಿಖೆಯ ಭರವಸೆ ನೀಡಿದರು. ಇನ್ನೂ ಈ ಒಂದು ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಸುಧೀರ್ ಮುಧೋಳ, ಲಕ್ಷ್ಮಣ ದೊಡಮನಿ,ಜಿಲಾನಿ ಖಾಜಿ,ಸಿಡ್ಲಪ್ಪ ಹೆಗಡೆ,ಚಂದ್ರು ಅಂಗಡಿ, ಮಂಜು ಸುತಗಟ್ಟಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.