ಮೈಸೂರು –
ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯೊಬ್ಬಳು ಪರೀಕ್ಷಾ ಕೇಂದ್ರದಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.ಹೌದು ಮೈಸೂರಿನ ತಿ.ನರಸೀಪುರದ ಅಕ್ಕೂರು ಗ್ರಾಮದ ವಾಸಿ ಅನುಶ್ರೀ ಮೃತಪಟ್ಟಿರುವ ದುರ್ದೈವಿಯಾಗಿದ್ದಾಳೆ. ನರಸೀಪುರದ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ.
ಪರೀಕ್ಷೆ ಬರೆಯುವ ವೇಳೆಯಲ್ಲಿ ಅನುಶ್ರೀ ಕುಸಿದು ಬಿದ್ದಳು ತೀವ್ರ ಅಸ್ವಸ್ಥಗೊಂಡ ಅನುಶ್ರೀಯನ್ನು ಕೂಡಲೇ ನರಸೀ ಪುರದ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಯಿತು. ಆದರೆ ಅಷ್ಟರಾಗಲೆ ಆಕೆಯ ಪ್ರಾಣ ಪಕ್ಷಿ ಹಾರಿ ಹೋಗಿತ್ತು.
ಅನುಶ್ರೀ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ತರುವಾಯ ಡಿಡಿಪಿಐ, ಬಿಇಒ ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಪಡೆದರು.