This is the title of the web page
This is the title of the web page

Live Stream

[ytplayer id=’1198′]

July 2024
T F S S M T W
 123
45678910
11121314151617
18192021222324
25262728293031

| Latest Version 8.0.1 |

ಚಿಕ್ಕಬಳ್ಳಾಪುರ

ಬೈಕ್ ವೀಲ್ಹಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ವಿದ್ಯಾರ್ಥಿ – ಸಿನಿಮೀಯ ಸ್ಟೈಲ್ ನಲ್ಲಿ ವಿಲ್ಹೀಂಗ್ ಮಾಡಿ ಪ್ರಾಣ ಕಳೆದುಕೊಂಡ ಅಪ್ರೋಜ್…..

ಬೈಕ್ ವೀಲ್ಹಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ವಿದ್ಯಾರ್ಥಿ – ಸಿನಿಮೀಯ ಸ್ಟೈಲ್ ನಲ್ಲಿ ವಿಲ್ಹೀಂಗ್ ಮಾಡಿ ಪ್ರಾಣ ಕಳೆದುಕೊಂಡ ಅಪ್ರೋಜ್…..
WhatsApp Group Join Now
Telegram Group Join Now

ಚಿಕ್ಕಬಳ್ಳಾಪುರ

ಬೈಕ್ ವೀಲ್ಹಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ವಿದ್ಯಾರ್ಥಿ – ಸಿನಿಮೀಯ ಸ್ಟೈಲ್ ನಲ್ಲಿ ವಿಲ್ಹೀಂಗ್ ಮಾಡುತ್ತಿದ್ದ ವಿದ್ಯಾರ್ಥಿ ಅಪ್ರೋಜ್

ಹೌದು ಸಿನಿಮೀಯ ಶೈಲಿಯಲ್ಲಿ ಬೈಕ್ ವೀಲ್ಹಿಂಗ್ ಮಾಡುತ್ತಿದ್ದಾಗ ನಿಯಂತ್ರಣ ಕಳೆದುಕೊಂಡ ಪರಿಣಾಮ ಅಪಘಾತಕ್ಕೀಡಾಗಿ ವಿದ್ಯಾರ್ಥಿ ಯೊಬ್ಬ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಯಲ್ಲಿ ಸಾವುಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿ ದ್ದಾನೆ ಅಪ್ರೋಜ್ ಪಾಷಾ (16) ಮೃತ ವಿದ್ಯಾರ್ಥಿ ಯಾಗಿದ್ದಾನೆ.

ಮೈಲಾಂಡಹಳ್ಳಿ ಗ್ರಾಮದ 18 ವರ್ಷದ ತಾಜ್ ಉಲ್ಲಾ ಷರೀಪ್ ಹಾಗೂ ಅಪ್ರೋಜ್ ಪಾಷಾ ಅತಿವೇಗವಾಗಿ ಅಡ್ಡಾದಿಡ್ಡಿಯಾಗಿ ಅಜಾಗುರು ಕತೆಯಿಂದ ಬೈಕ್ ವೀಲ್ಹಿಂಗ್ ಮಾಡುತ್ತಿದ್ದಾಗ ನಿಯಂತ್ರಣ ತಪ್ಪಿ ಕೆ.ಎಸ್.ತಮ್ಮರೆಡ್ಡಿಯವರ ಜಮೀನನ ಬಳಿ ರಸ್ತೆಯ ಮೋರಿಗೆ ಡಿಕ್ಕಿ ಹೊಡೆದು ನಂತರ ಡಿಕ್ಕಿ ರಭಸಕ್ಕೆ ಬೈಕ್ ಸವಾರ ತಾಜ್ ಉಲ್ಲಾ ಷರೀಪ್ ಪ್ರಾಣಾಪಾಯದಿಂದ ಪಾರಾಗಿದ್ದನು.

ಆದರೆ ಗಂಭೀರ ಗಾಯಗೊಂಡಿದ್ದ ಅಪ್ರೋಜ್ ಪಾಷಾನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ವಿಕ್ಟೊರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.ಇತ್ತ ಮಗನನ್ನು ಕಳೆದುಕೊಂಡ ಆತನ ತಂದೆ ತಾಯಿ ದುಃಖತಪ್ತ ರಾಗಿದ್ದಾರೆ.

ಇನ್ನೊಂದೆಡೆ ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ 279, 337 ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಚಿಕ್ಕಬಳ್ಳಾಪುರ…..


Google News

 

 

WhatsApp Group Join Now
Telegram Group Join Now
Suddi Sante Desk