ಕೊಪ್ಪಳ –
ಹೌದು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕು ನಿಲೋಗಲ್ ಹಾಗೂ ಬಿಳೇಕಲ್ ಮಾರ್ಗಮಧ್ಯೆ ಬೈಕ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ ಕುಷ್ಟಗಿ ತಾಲೂಕಿನ ನಿಲೋಗಲ್ ಹಾಗೂ ಬಿಳೇಕಲ್ ರಸ್ತೆಯಲ್ಲಿ ಬೈಕ್ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ ಶಿಕ್ಷಕ ರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬಿಳೇಕಲ್ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಬಸಪ್ಪ ಹಿರೇಹಾಳ (45) ಸಾವಿಗೀಡಾದ ದುರ್ದೈವಿಯಾಗಿದ್ದು ಇವರು ಕೆಲಸ ಮುಗಿಸಿ ಮನೆಗೆ ಬೈಕ್‌ನಲ್ಲಿ ವಾಪಸ್ ಬರುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಹನಮಸಾಗರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
ಕಾರು- ಬೈಕ್ ಅಪಘಾತದಲ್ಲಿ ಜಮೀನಿಗೆ ನುಗ್ಗಿದೆ ಕಾರು ಬೈಕ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು ಅಪಘಾತ ದಲ್ಲಿ ಬೈಕ್ ಗೆ ಗುದ್ದಿದ ಕಾರು ಡಿಕ್ಕಿ ಯಾಗಿ ಜಮೀನಿಗೆ ನುಗ್ಗಿದೆ.






















