.
ಕಲಬುರಗಿ –
ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆ ಮನನೊಂದ ಶಿಕ್ಷಕಿ ಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ದಿಗ್ಗಾಂವ್ ಗ್ರಾಮದಲ್ಲಿ ನಡೆದಿದೆ. ಭೂಮಿಕಾ ಊಡಗಿ(36) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿಯಾಗಿದ್ದು ಐದು ವರ್ಷದ ಹಿಂದೆ ದಿಗ್ಗಾಂವ್ ಗ್ರಾಮದ ನಿವಾಸಿ ಶರಣಬಸಪ್ಪ ಎಂಬು ವರೊಂದಿಗೆ ವಿವಾಹವಾಗಿದ್ದ ಭೂಮಿಕಾ ದಿಗ್ಗಾಂವ್ ಗ್ರಾಮದ ಸರ್ಕಾರಿ ಫ್ರೌಡ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಬೆಳಗ್ಗೆ ಶಾಲೆಗೆ ಹೋಗುವುದಾಗಿ ಹೇಳಿ ಮನೆಯಿಂದ ಹೋಗಿದ್ದಾರೆ. ಅತ್ತ ಶಾಲೆಗೂ ಹೋಗದೆ ಇತ್ತ ಮನೆಗೂ ಬಾರದಿದ್ದಾಗ ಆತಂಕಗೊಂಡ ಮನೆಯವರು ಹುಡುಕಲಾ ರಂಬಿಸಿದ್ದಾರೆ.
ಈ ವೇಳೆ ಬಾವಿಯ ಬಳಿ ಭೂಮಿಕಾ ಚಪ್ಪಲಿ ಸಿಕ್ಕು ಅನು ಮಾನಗೊಂಡು ಬಾವಿಯಲ್ಲಿ ಹುಡುಕಿದಾಗ ಶವ ಪತ್ತೆಯಾ ಗಿದೆ.ಇನ್ನೂ ಮದುವೆಯಾಗಿ ಐದು ವರ್ಷ ಕಳೆದರೂ ಸಹ ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಮನನೊಂ ದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದ್ದು ಈ ಕುರಿತು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.