ರಾಯಚೂರು –
7 ನೇ ವೇತನ ಆಯೋಗದ ಶಿಫಾರಸು ಜಾರಿಗೆ ಸರ್ಕಾರ ಇನ್ನೂ ವಿಳಂಬ ಮಾಡಿದಲ್ಲಿ ಹೋರಾಟ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಎಚ್ಚರಿಕೆ ನೀಡಿದ್ದಾರೆ.ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ನೌಕರರ ವೇತನ ಹೆಚ್ಚಳ ಸಂಬಂಧ ನಿರ್ಧಾರ ಕೈಗೊಳ್ಳುವ ನಿರೀಕ್ಷೆ ಇತ್ತು.
ಆದರೆ, ಯಾವುದೇ ನಿರ್ಧಾರ ಕೈಗೊಂಡಿಲ್ಲ. ಇದರಿಂದಾಗಿ ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರು ಅಸಮಾಧಾನಗೊಂಡಿದ್ದಾರೆ. ವೇತನ ಆಯೋಗದ ಶಿಫಾರಸು ಯಥಾವತ್ತಾಗಿ ಜಾರಿಗೆ ತರಲು ಜೂನ್ ಅಂತ್ಯದವರೆಗೆ ಕಾಯು ತ್ತೇವೆ. ಸರ್ಕಾರ ನಿರ್ಲಕ್ಷ್ಯ ತೋರಿದರೆ ಹೋರಾಟ ನಡೆಸಲಾಗುವುದು ಎಂದರು
ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವೇತನ ಹೆಚ್ಚಳ ಬಗ್ಗೆ ಚರ್ಚಿಸುವುದಾಗಿ ಮುಖ್ಯಮಂತ್ರಿ ಗಳು ಭರವಸೆ ನೀಡಿದ್ದಾರೆ.ಸಂಪುಟದಲ್ಲಿ ತೀರ್ಮಾನ ತೆಗೆದುಕೊಳ್ಳಲು ಕಾಲಾವಕಾಶ ನೀಡುತ್ತೇವೆ. ಇನ್ನೂ ವಿಳಂಬ ಮಾಡಿದರೆ ಹೋರಾಟ ನಡೆಸಲಾಗುವುದೆಂದರು.
ಸುದ್ದಿ ಸಂತೆ ನ್ಯೂಸ್ ರಾಯಚೂರು…..