ಧಾರವಾಡ –
ಮನೆಯಲ್ಲಿಯೇ ನೇಣು ಬಿಗಿದುಕೊಂಡು ಯುವಕನೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಗಾಂಧಿ ವೃತ್ತದಲ್ಲಿ ಈ ಒಂದು ಘಟನೆ ನಡೆದಿದೆ.ನಗರದ ಗಾಂಧಿ ವೃತ್ತದ ಬಳಿಯ ನಿವಾಸಿಯಾಗಿರುವ ಕಾರ್ತಿಕ ಕಾಟಕರ್ (28)ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ.

ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದು ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಇನ್ನೂ ವಿಷಯ ತಿಳಿದ ಧಾರವಾಡ ಶಹರ ಪೊಲೀಸ್ ಠಾಣೆ ಸಿಬ್ಬಂದಿಗಳು ಸ್ಥಳಕ್ಕೇ ಭೇಟಿ ನೀಡಿ ಪರಿಶೀಲನೆ ಮಾಡಿದ್ರು. ಸಧ್ಯ ಪ್ರಕರಣವನ್ನು ದಾಖಲು ಮಾಡಿಕೊಂಡಿದ್ದು ತನಿಖೆ ಮಾಡ್ತಾ ಇದ್ದಾರೆ.