ರಾಜ್ಯದಲ್ಲಿ ಪಂಚಾಯತ್ ರಾಜ್ಯ ವ್ಯವಸ್ಥೆಗೆ ಮೇಜರ್ ಸರ್ಜರಿ – ತಾಲ್ಲೂಕು ಪಂಚಾಯತಿ ವ್ಯವಸ್ಥೆ ರದ್ದು …..!!

Suddi Sante Desk

ಬೆಂಗಳೂರು –

ರಾಜ್ಯದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಿಷ್ಠಗೊಳಿಸುವಂತ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದಾಗಿದೆ. ಈ ಉದ್ದೇಶದಿಂದ ತಾಲೂಕು ಪಂಚಾಯಿತಿಗಳನ್ನು ರದ್ದುಗೊಳಿಸಿ, ಎರಡು ಹಂತದ ಪಂಚಾಯತ್ ರಾಜ್ ವ್ಯವಸ್ಥೆಯನ್ನು ರಾಜ್ಯದಲ್ಲಿ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದ್ದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಜೆಡಿಎಸ್ ಸದಸ್ಯ ವೆಂಕಟರಾವ್ ನಾಡಗೌಡ ಪ್ರಶ್ನೆಗೆ ಉತ್ತರಿಸಿ ಮಾತನಾಡಿದ ಅವರು, ಕೇಂದ್ರ ಕಾನೂನಿನ ಮೂಲಕ ರಾಜ್ಯದಲ್ಲಿ ಮೂರು ಹಂತಗಳ ಪಂಚಾಯ್ತಿ ವ್ಯವಸ್ಥೆ ಜಾರಿಯಲ್ಲಿದೆ. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳ ಪೈಕಿ ತಾಲೂಕು ಪಂಚಾಯಿತಿ ಬೇಕಿಲ್ಲ ಎಂದರು.

ಹೀಗಾಗಿ ರಾಜ್ಯದಲ್ಲಿ ತಾಲೂಕು ಪಂಚಾಯಿತಿಗಳನ್ನು ರದ್ದುಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ ಎಂಬುದಾಗಿ ಹೇಳಿದರು.

ಇನ್ನೂ ಮುಂದುವರೆದು ಮಾತನಾಡಿದ ಅವರು, ತಾಲೂಕು ಪಂಚಾಯಿತಿಗಳು ಪರಿಣಾಮಕಾರಿ ಯಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ 3 ಹಂತಗಳ ಪಂಚಾಯ್ತಿ ವ್ಯವಸ್ಥೆಯನ್ನು ಎರಡು ಹಂತಗಳ ಪಂಚಾಯಿತಿ ವ್ಯವಸ್ಥೆಯನ್ನು ಜಾರಿಗೆ ತರಬೇಕು ಎಂಬ ಭಾವನೆ ಬಹುತೇಕರಲ್ಲಿದೆ ಎಂದರು.

ಇನ್ನೂ ಗಮನಾರ್ಹ ಅಂಶವೆಂದರೆ ಈ ಬಾರಿ ಬಹುತೇಕರು ತಾಲೂಕು ಪಂಚಾಯಿತಿಯಲ್ಲಿ ಏನೂ ಕೆಲಸ ಮಾಡಲು ಸಾಧ್ಯವಿಲ್ಲ ಎಂಬ ಕಾರಣಕ್ಕಾಗಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ ಹೀಗಾಗಿ ಈ ಒಂದು ನಿರ್ಧಾರಕ್ಕೆ ಬರಲಾಗುತ್ತಿದೆ ಎಂದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.