ಎಚ್.ಡಿ.ಕೋಟಿ –
ನಿವೃತ್ತ ಶಿಕ್ಷಕರಿಂದ ಲಂಚ ಪಡೆದ ಆರೋಪದ ಮೇಲೆ ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಚಂದ್ರಕಾಂತ್ ಹಾಗೂ ಕಚೇರಿ ಅಧೀಕ್ಷಕ ಶಂಕರ್ ಅವರನ್ನು ಇಲಾಖೆ ಕಚೇರಿಯಲ್ಲೇ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ.

ನಿವೃತ್ತಿ ವೇತನಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಬೆಂಗಳೂರಿನ ಮಹಾ ಲೆಕ್ಕಾಧಿಕಾರಿಗಳ ಕಚೇರಿಗೆ ಕಳಿಸುವ ಸಂಬಂಧ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಅಧೀಕ್ಷಕ ಮತ್ತು ದ್ವಿತೀಯ ದರ್ಜೆ ಸಹಾಯಕರು ₹9 ಸಾವಿರ ಕೊಡುವಂತೆ ಆಗ್ರಹಿಸಿದ್ದಾರೆಂದು ನಂಜನಗೂಡು ತಾಲ್ಲೂಕು ರಾಂಪುರ ಗ್ರಾಮದ ನಿವೃತ್ತ ಶಿಕ್ಷಕ ಸಿದ್ದರಾಜು ಅವರು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳಿಗ ದೂರು ಕೊಟ್ಟಿದ್ದರು.ದೂರು ಆಧರಿಸಿ ನಿನ್ನೆ ಬೆಳಿಗ್ಗೆಯಿಂದ ಸಂಜೆ ತನಕ ಕಚೇರಿ ಮುಂದೆ ಕಾದ ಅಧಿಕಾರಿಗಳು ಸಂಜೆ 5 ಗಂಟೆಗೆ ದಾಳಿ ನಡಸಿದರು.

ಕಚೇರಿಯ ದ್ವಿತೀಯ ದರ್ಜೆ ಸಹಾಯಕ ರವಿ ಕಚೇರಿ ಯಿಂದ ಕೆಲಸದ ನಿಮಿತ್ತ ಹೊರಗೆ ಹೋಗಿದ್ದರಿಂದ ಅಧಿಕಾರಿಗಳ ಕೈಗೆ ಸಿಕ್ಕಿಲ್ಲ.ಎಸಿಬಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸುಜಿತ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ತಮ್ಮಯ್ಯ ನೇತೃತ್ವದಲ್ಲಿ ಎಸ್‌ಐಗಳಾದ ಚಿತ್ತರಂಜನ್, ಮೋಹನ್ ಕೃಷ್ಣ,ಚೇತನ್,ಗುರುಪ್ರಸಾದ್,ಮಂಜು, ಪುಷ್ಪಲತಾ,ಯೋಗೇಶ್ ಇದ್ದರು.