ಶಿವಮೊಗ್ಗ –
ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಕೊಳವೆ ಬಾವಿಗೆ ಟಿಸಿ ಅಳವಡಿಸಿ, ವಿದ್ಯುತ್ ಸಂಪರ್ಕ ಕಲ್ಪಿಸುವ ಸಲುವಾಗಿ, ಐದು ಸಾವಿರ ರೂ. ಲಂಚ ಪಡೆಯುತ್ತಿದ್ದ ಮೆಸ್ಕಾಂನ ಸಹಾಯಕ ಕಾರ್ಯ ಪಾಲಕ ಎಂಜಿನಿಯರ್ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬಲೆಗೆ ಬಿದ್ದಿದ್ದಾರೆ.ಮೆಸ್ಕಾಂನ ಹೊಳೆ ಹೊನ್ನೂರು ಉಪ ವಿಭಾಗದ ಸಹಾಯಕ ಕಾರ್ಯ ಪಾಲಕ ಎಂಜಿನಿಯರ್ ಬಿ.ಎಸ್. ಪ್ರಕಾಶ್, ಎಸಿಬಿ ಬಲೆಗೆ ಬಿದ್ದವರಾಗಿದ್ದಾರೆ. ಪ್ರಕಾಶ್ ಅವರು ಐದು ಸಾವಿರ ರೂ. ಲಂಚ ಪಡೆಯುತ್ತಿದ್ದ ಸಮಯದಲ್ಲಿ ಹೊಳೆಹೊನ್ನೂರು ಉಪ ವಿಭಾಗ ಕಚೇರಿಯಲ್ಲೇ ದಾಳಿ ನಡೆಸಲಾಗಿದ್ದು, ಎಂಜಿನಿಯರ್ ಬಿ.ಎಸ್.ಪ್ರಕಾಶ್ ಅವರ ರೆಡ್ ಹ್ಯಾಂಡ್ ಆಗಿ ಸಿಕ್ಕಿಹಾಕಿಕೊಂಡಿದ್ದಾರೆ.

ಎಸಿಬಿಯ ಪೂರ್ವ ವಲಯ ಎಸ್‍ಪಿ ಜಯಪ್ರಕಾಶ್ ಅವರ ಮಾರ್ಗದರ್ಶನದಲ್ಲಿ ಹಾಗೂ ಡಿವೈಎಸ್‍ಪಿ ಲೋಕೇಶ್ ನೇತೃತ್ವದಲ್ಲಿ ನಡೆದ ಈ ದಾಳಿಯಲ್ಲಿ, ಇನ್ಸ್ ಪೆಕ್ಟರ್ ಇಮ್ರಾನ್ ಬೇಗ್, ಸಿಬ್ಬಂದಿಗಳಾದ ವಸಂತ ಎನ್.ಕೆ. ಸೇರಿದಂತೆ ಹಲವರು ಕಾರ್ಯಾ ಚರಣೆಯಲ್ಲಿ ಪಾಲ್ಗೊಂಡಿದ್ದರು.