ಚಾಮರಾಜನಗರ –
ಹನಿ ನೀರಾವರಿ ಯೋಜನೆಯ ಫಲಾನುಭವಿಗಳಿಗೆ ಸಬ್ಸಿಡಿ ಹಣ ಮಂಜುರಾತಿಗೆ ಲಂಚಕ್ಕೆ ಬೇಡಿಕೆ ಯಿಟ್ಟಿದ್ದ ತೊಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕರ ಎಸಿಬಿ ಬಲೆಗೆ ಬಿದ್ದಿದ್ದಾರೆ. ಹೌದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಈ ಒಂದು ಘಟನೆ ನಡೆದಿದೆ.

ಗುಂಡ್ಲುಪೇಟೆಯ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಶಿವಲಿಂಗಪ್ಪರವರೇ ಎಸಿಬಿ ಬಲೆಗೆ ಸಿಕ್ಕಿ ಬಿದ್ದ ಅಧಿಕಾರಿಯಾಗಿದ್ದಾರೆ. ಹನಿ ನೀರಾವರಿ ಯೋಜನೆಯ ಸಲಕರಣೆಗಳ ವಿತರಕ ಕಡಬೂರು ಮಂಜು ರವರ ಬಳಿ 50 ಸಾವಿರ ₹ ಬೇಡಿಕೆ ಇಟ್ಟಿದ್ದರು.

ಇದರಿಂದ ಬೇಸತ್ತ ಕಡಬೂರು ಮಂಜು ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದರು. ಎಸಿಬಿ ಬಂದ ದೂರಿನನ್ವಯ ಡಿವೈಎಸ್ಪಿ ಸದಾನಂದ, ಇನಸ್ಪೇಕ್ಟರ್ ದೀಪಕ್, ಕಿರಣ್, ಸಿಬ್ಬಂದಿಗಳಾದ ಸತೀಶ್, ಮಹದೇವಸ್ವಾಮಿ, ಕಾರ್ತಿಕ್, ನಾಗೇಂದ್ರ ರವರು ದಾಳಿ ನಡೆಸಿ ಅಧಿಕಾರಿಯನ್ನು ವಶಕ್ಕೆ ತಗೆದು ಕೊಂಡು ವಿಚಾರಣೆ ಮಾಡತಾ ಇದ್ದಾರೆ.

ಗುಂಡ್ಲುಪೇಟೆ ತಾಲ್ಲೂಕಿನ ರೈತರಿಗೆ ಹನಿ ನೀರಾವರಿ ಯೋಜನೆಯಡಿ ಸಬ್ಸಿಡಿ ಹಣವನ್ನು ಮಂಜೂರು ಮಾಡಲು ಪ್ರತಿ ಘಟಕಕ್ಕೆ ಇಂತಿಷ್ಟು ಎಂದು ಲಂಚದ ಹಣ ನಿಗದಿಪಡಿಸಿದ್ದ ಶಿವಲಿಂಗಪ್ಪ ಎಸಿಬಿ ದಾಳಿಗೆ ಬೆಚ್ಚಿ ಬಿದ್ದಿದ್ದಾರೆ.

ಎಸಿಬಿ ದಾಳಿಯಿಂದ ತೋಟಗಾರಿಕೆ ಇತರೆ ಸಿಬ್ಬಂದಿಗಳು ಎಚ್ಚೆತ್ತುಕೊಂಡಿದ್ದು, ರೈತರ ಕಡತಗಳನ್ನು ವಿಲೇವಾರಿ ಮಾಡಲು ಮುಂದಾಗಿದ್ದಾರೆ.