ಧಾರವಾಡ –
ಯೊಗೀಶಗೌಡ ಕೊಲೆ ಪ್ರಕರಣದ ತನಿಖೆಯನ್ನು ಮತ್ತೆ ಸಿಬಿಐ ಅಧಿಕಾರಿಗಳು ಚುರುಕುಗೊಳಿಸಿದ್ದಾರೆ.

ಮತ್ತೆ ಇಂದಿನಿಂದ ಧಾರವಾಡದಲ್ಲಿ ತನಿಖೆ ಆರಂಭಿಸಿದ ಸಿಬಿಐ ಅಧಿಕಾರಿಗಳು ಕೊಲೆ ಪ್ರಕರಣದ ಪ್ರಮುಖ ಆರೋಪಿ ಬಸವರಾಜ ಮುತ್ತಿಗಿ ಸೇರಿದಂತೆ ಹಲವರಿಗೆ ಸಿಬಿಐ ಅಧಿಕಾರಿಗಳು ಬುಲಾವ್ ನೀಡಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿಯಾಗಿರುವ ಬಸವರಾಜ ಮುತ್ತಿಗಿಗೆ ಸಿಬಿಐ ಅಧಿಕಾರಿಗಳು ಮತ್ತೆ ಬುಲಾವ್ ನೀಡಿದ್ದಾರೆ. ಬುಲಾವ್ ಬಂದ ಹಿನ್ನಲೆಯಲ್ಲಿ ಧಾರವಾಡದ ಉಪ ನಗರ ಠಾಣೆಗೆ ಕೊಲೆ ಪ್ರಕರಣದ ಪ್ರಮುಖ ಆರೋಪಿ ಬಸವರಾಜ ಮುತ್ತಿಗೆ ಸಿಬಿಐ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಈಗಾಗಲೇ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ ಕುಲಕರ್ಣಿಯವರು ಸದ್ಯ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಬೆಳಗಾವಿ ಹಿಂಡಲಗಾ ಜೈಲಿನಲ್ಲಿದ್ದಾರೆ. ಕೆಲವು ದಿನಗಳಿಂದ ಧಾರವಾಡದಲ್ಲಿ ವಿಚಾರಣೆಗೆ ಬ್ರೆಕ್ ನೀಡಿದ ಸಿಬಿಐ ಅಧಿಕಾರಿಗಳು ಈಗ ಬೆಳ್ಳಂಬೆಳಗ್ಗೆ ಕೊಲೆ ಪ್ರಕರಣಜ ಆರೋಪಿಯನ್ನು ಕರೆಯಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಈಗಾಗಲೇ ಹಲವು ಬಾರಿ ಬಸವರಾಜ ಮುತ್ತಿಗೆಯನ್ನು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಇಂದು ಮತ್ತೆ ವಿಚಾರಣೆಗೆ ಕರೆದಿದ್ದು, ಮತ್ತೆ ಯಾವೆಲ್ಲ ಮಾಹಿತಿಯನ್ನು ಮುತ್ತಿಗೆಯಿಂದ ಪಡೆಯಲ್ಲಿದ್ದಾರೆ ಎಂಬುವುದು ಈಗ ಕುತೂಹಲ ಮೂಡಿಸಿದ್ದೆ.ಇನ್ನೂಇದರೊಂದಿಗೆ ಇನ್ನೂ ಹಲವರಿಗೆ ಸಿಬಿಐ ಅಧಿಕಾರಿಗಳು ವಿಚಾರಣೆಗೆ ಬರಲು ಹೇಳಿದ್ದಾರೆ. ಹೀಗಾಗಿ ಒಬ್ಬೊಬ್ಬರಾಗಿ ಈ ಒಂದು ಪ್ರಕರಣದಲ್ಲಿ ಬುಲಾವ್ ಬಂದವರು ವಿಚಾರಣೆಗೆ ಬರುತ್ತಿದ್ದಾರೆ.ಧಾರವಾಡದ ಉಪನಗರ ಪೊಲೀಸ್ ಠಾಣೆ ಮೇಲೆ ಸಿಬಿಐ ಅಧಿಕಾರಿಗಳು ಮತ್ತೆ ವಿಚಾರಣೆಯನ್ನು ಮುಂದುವರೆಸಿದ್ದಾರೆ.