ಹುಬ್ಬಳ್ಳಿ ಧಾರವಾಡ –
ಹುಬ್ಬಳ್ಳಿ ಧಾರವಾಡ ಸೈಬರ್ ಕ್ರೈಮ್ ಪೊಲೀಸರು ಕಾರ್ಯಾಚರಣೆ ಮಾಡಿ ಫೇಸ್ ಬುಕ್ ನಲ್ಲಿ ಯುವತಿಯೊಬ್ಬಳನ್ನು ಪರಿಚಯ ಮಾಡಿಕೊಂಡು ನಂತರ ಹಾಯ್ ಬೈ ಅನ್ನುತ್ತಾ ಚಾಟಿಂಗ್ ಮಾಡಿ ತದನಂತರ ನನ್ನ ತಾಯಿಗೆ ಹುಷಾರಿಲ್ಲ ಎಂದು ಹೇಳಿ ಡೆಬಿಟ್ ಕಾರ್ಡ್ ಮೂಲಕ ಹಣ ವರ್ಗಾವಣೆ ಮಾಡಿಕೊಂಡ ಆರೋಪಿಯನ್ನು ಬಂಧಿಸಿದ್ದಾರೆ.

ಹುಬ್ಬಳ್ಳಿಯ ರೇಲ್ವೆ ಉದ್ಯೋಗಿಯಾಗಿರುವ ವಿಜಯಕುಮಾರ್ ಯಾಮಾ ಎಂಬುವರ ಮಗಳಿಗೆ ಯುವಕ ಮೋಸ ಮಾಡಿದ ಕುರಿತು ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಲಾಗಿತ್ತು.ದೂರು ದಾಖಲು ಮಾಡಿಕೊಂಡ ಸೈಬರ್ ಕ್ರೈಮ್ ಇನ್ಸ್ಪೆಕ್ಟರ್ ಎಸ್ ಬಿ ಮಾಳಗೊಂಡ ಮತ್ತು ಸಿಬ್ಬಂದಿ ಕಾರ್ಯಾಚರಣೆ ಮಾಡಿ ಫೇಸ್ ಬುಕ್ ನಲ್ಲಿ ಪರಿಚಯ ಮಾಡಿಕೊಂಡ ಆರೋಪಿಯನ್ನು ಬಂಧನ ಮಾಡಿದ್ದಾರೆ.

ಆರೋಪಿಯ ಕುರಿತು ಮಾಹಿತಿಯನ್ನು ಪಡೆದುಕೊಂಡ ಸೈಬರ್ ಕ್ರೈಮ್ ಪೊಲೀಸರು ರೋಹಿತ್ ಕುಮಾರ್ ವೆಂಕಟೇಶ್ ಕೃಷ್ಟಯ್ಯನಪಾಳ್ಯ ಬೆಂಗಳೂರು ಆರೋಪಿಯನ್ನು ಬಂಧನ ಮಾಡಿದ್ದಾರೆ. ಇನ್ನೂ ಬಂಧಿತ ಆರೋಪಿಯಿಂದ ಹೆಚ್ಚಿನ ಮಾಹಿತಿಯನ್ನು ಪೊಲೀಸರು ಪಡೆದುಕೊಳ್ಳುತ್ತಿದ್ದಾರೆ.

ಪೊಲೀಸ್ ಹಿರಿಯ ಅಧಿಕಾರಿಗಳ ಮಾರ್ಗದರ್ಶ ನದಲ್ಲಿ ಸೈಬರ್ ಕ್ರೈಮ್ ಇನ್ಸ್ಪೆಕ್ಟರ್ ಎಸ್ ಬಿ ಮಾಳಗೊಂಡ, ಪಿಎಸ್ಐ ರಾಘವೇಂದ್ರ ಗುರ್ಲ,ಸಿಬ್ಬಂದಿ ಗಳಾದ ವಾಯ್ ಎಫ್ ದಾಸನ್ನವರ,ಪಿ ಬಿ ಹಿರಗನ್ನವರ,ಮೋಹನ ಈಳಿಗೇರ,ಆರ್ ಜಿ ಗೋಕುಲ, ಸೇರಿದಂತೆ ಹಲವು ಸಿಬ್ಬಂದಿಗಳು ಪಾಲ್ಗೊಂಡಿದ್ದರು.