This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

Local News

ಸರ್ಕಾರಿ ನೌಕರರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸಲು ಕ್ರಮ – ವಿವಿಧ ಬೇಡಿಕೆಗಳ ಕುರಿತು ಸರ್ಕಾರಕ್ಕೆ ಜಿಲ್ಲಾಡಳಿತದಿಂದ ಪ್ರಸ್ತಾವನೆ ಸಲ್ಲಿಕೆ…..

WhatsApp Group Join Now
Telegram Group Join Now

ಧಾರವಾಡ –

ನೌಕರರ ಕುಂದುಕೊರತೆಗಳನ್ನು ಬಗೆಹರಿಸಲು ಕ್ರಮವಹಿಸ ಲಾಗುವುದು.ಕೆಲವು ಬೇಡಿಕೆಗಳನ್ನು ಜಿಲ್ಲಾ ಹಂತದಲ್ಲಿ ಪರಿಹರಿಸಲಾಗುವುದು ಮತ್ತು ಉಳಿದವುಗಳನ್ನು ರಾಜ್ಯ ಮಟ್ಟಕ್ಕೆ ಪ್ರಸ್ತಾವನೆ ಕಳಿಸಲಾಗುವುದು ಎಂದು ಜಿಲ್ಲಾಧಿ ಕಾರಿ ಗುರುದತ್ತ ಹೆಗಡೆ ಅವರು ಹೇಳಿದರು.ಜಿಲ್ಲಾಧಿಕಾರಿ ಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸರಕಾರಿ ನೌಕರ ಕುಂದುಕೊರತೆಗಳ ನಿವಾರಣೆಗಾಗಿ ರಚನೆಗೊಂಡಿ ರುವ ಜಿಲ್ಲಾಮಟ್ಟದ ಜಂಟಿ ಸಮಾಲೋಚನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ನೌಕರರು ಕಚೇರಿ ಕರ್ತವ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಸಾರ್ವಜನಿಕರಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಮೂಲಕ ಸರಕಾರದ ಜನಪರ ಯೋಜನೆಗಳನ್ನು ಅರ್ಹರಿಗೆ ತಲುಪಿ ಸಬೇಕೆಂದು ಅವರು ಹೇಳಿದರು.ನೌಕರರಿಗೆ ಕುಂದುಕೊ ರತೆ ಉಂಟಾಗದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇಲಾಖಾ ಮಟ್ಟದಲ್ಲಿ ಕ್ರಮವಹಿಸಬೇಕು ಎಂದು ಜಿಲ್ಲಾಧಿ ಕಾರಿಗಳು ನಿರ್ದೇಶನ ನೀಡಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುರೇಶ ಇಟ್ನಾಳ ಅವರು ಮಾತನಾಡಿ ಜಿಲ್ಲಾ ಪಂಚಾಯತ ಹಂತದಲ್ಲಿ ನೌಕರರ ಎಲ್ಲ ಬೇಡಿಕೆ ಈಡೇರಿ ಸಲಾಗುವುದು.ನೌಕರರ ವಸತಿಗೃಹ ರಿಪೇರಿ ಕಾರ್ಯವನ್ನು ಜಿಲ್ಲಾ ಪಂಚಾಯತ ಅನುದಾನದಲ್ಲಿ ಕೈಗೊಳ್ಳಲಾಗುತ್ತಿದೆ. ಡಿಎಚ್‍ಓ ಸೇರಿದಂತೆ ಇಲಾಖೆ ಅಧಿಕಾರಿಗಳು ಈ ಕುರಿತು ಮಾಹಿತಿ ಸಲ್ಲಿಸಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಅವರು ಮಾತನಾಡಿ ನೌಕರರ ಕಚೇರಿ ಕರ್ತವ್ಯಕ್ಕೆ ತೊಂದರೆ ಆಗದಂತೆ ಕ್ರಮವಹಿಸಲಾಗಿದೆ.ಇಲಾಖೆ ಕಾರ್ಯಗಳನ್ನು ನಿಯಮಾನುಸಾರ ಮಾಡಬೇಕು ಎಂದರು.ನೌಕರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಫ್.ಸಿದ್ದನಗೌಡರ ಅವರು ವಿವಿಧ ಇಲಾಖೆಗಳಲ್ಲಿನ ನೌಕರ ವಯಕ್ತಿಕ ಹಾಗೂ ಸಾಮೂಹಿಕ ಸಮಸ್ಯೆಗಳ ಕುರಿತು ವಿಷಯ ಮಂಡನೆ ಮಾಡಿದರು.

ಅವರು ಮಾತನಾಡಿ ಅನಧಿಕೃತ ವ್ಯಕ್ತಿಗಳು ಸರಕಾರಿ ಕಚೇರಿಗೆ ಕೆಲಸದ ವೇಳೆಯಲ್ಲಿ ಆಗಮಿಸಿ,ಕಚೇರಿ ಕರ್ತವ್ಯ ನಿರ್ವಹಣೆಗೆ ತೊಂದರೆ ಕೊಡುತ್ತಿದ್ದಾರೆ.ಈ ಕುರಿತು ಈಗಾಗಲೇ ಇರುವ ಕಾನೂನುಗಳನ್ನು ಕಟ್ಟುನಿಟ್ಟಾಗಿ ಅನು ಷ್ಠಾನಗೊಳಿಸಿ ನೌಕರರು ನಿರ್ಬಯವಾಗಿ ಕೆಲಸ ಮಾಡಲು ಸೂಕ್ತ ರಕ್ಷಣೆ ನೀಡಬೇಕೆಂದರು.

ಅವಳಿನಗರದಲ್ಲಿ ಜಾರಿಯಲ್ಲಿರುವ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಸರಕಾರಿ ಕಚೇರಿಗಳನ್ನು ಸೇರಿಸಿ ಸ್ಮಾರ್ಟ್ ಆಪೀಸ್ ಮಾಡಲು ಕ್ರಮವಹಿಸಬೇಕು.ಮಹಿಳಾ ನೌಕರ ರಿಗೆ ಕಚೇರಿಯಲ್ಲಿ ವಿಶ್ರಾಂತಿ ಕೊಠಡಿ,ಪ್ರತ್ಯೇಕ ಶೌಚಾಲಯ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು ಎಂದರು ಪಾರದರ್ಶಕ ಆಡಳಿತಕ್ಕೆ ಬಲ ತುಂಬಲು ಮಾಹಿತಿ ಹಕ್ಕು ಕಾಯ್ದೆ ಜಾರಿ ಆಗಿದೆ.ಆದರೆ ಅನೇಕರು ಅನಗತ್ಯವಾಗಿ ಆರ್.ಟಿ.ಐ ದುರ್ಬಳಕೆ ಮಾಡಿಕೊಂಡು ನೌಕರರು ಕರ್ತವ್ಯ ನಿರ್ವಹಿಸಲು ಕಿರಿಕಿರಿ ಉಂಟು ಮಾಡುತ್ತಿದ್ದಾರೆ.ಆದ್ದರಿಂದ ಎಲ್ಲ ಹಂತದ ನೌಕರರಿಗೆ ಆರ್.ಟಿ.ಐ. ಕಾಯ್ದೆ ಕುರಿತು ತರಬೇತಿ ಅರಿವು ನೀಡಲು ಕ್ರಮವಹಿಸಬೇಕು ಮತ್ತು ಆರ್‍ಟಿಐ ದುರ್ಬಳಕೆಯನ್ನು ತಪ್ಪಿಸಲು ಸೂಕ್ತ ಕ್ರಮಕೈಗೊಳ್ಳಬೇಕೆಂದು ಹೇಳಿದರು.

ಸರಕಾರಿ ನೌಕರರ ವಸತಿಗೃಹಗಳ ದುರಸ್ತಿಗೆ ನಿರ್ದೇಶನ ನೀಡಬೇಕು ಮತ್ತು ಲಕಮನಹಳ್ಳಿ ಪ್ರದೇಶದಲ್ಲಿ ವಸತಿ ಸಮುಚ್ಚಯ ನಿರ್ಮಾಣಕ್ಕೆ ಕ್ರಮಕೈಗೊಳ್ಳಬೇಕು.ಸರಕಾರಿ ನೌಕರರ ಕುಂದುಕೊರತೆಗಳನ್ನು ತಾಲೂಕು ಮಟ್ಟದಲ್ಲ ಆಲಿಸಿ,ಪರಿಹರಿಸಲು ಉಪವಿಭಾಗಾಧಿಕಾರಿಗಳ ನೇತೃತ್ವ ದಲ್ಲಿ ಬಗೆಹರಿಸಲು ಜಂಟಿ ಸಮಾಲೋಚನ ಸಭೆ ಆಯೋ ಜಿಸಲು ನಿರ್ದೇಶನ ನೀಡಬೇಕೆಂದು ಜಿಲ್ಲಾಧಿಕಾರಿಗಳಲ್ಲಿ ಎಸ್.ಎಫ್.ಸಿದ್ಧನಗೌಡರ ವಿನಂತಿಸಿದರು.

ಸರಕಾರಿ ನೌಕರ ಸಂಘದ ಹುಬ್ಬಳ್ಳಿ ತಾಲೂಕು ಘಟಕಕ್ಕೆ ಹುಬ್ಬಳ್ಳಿ ಮಿನಿವಿದಾನಸೌಧದಲ್ಲಿ ಸ್ಥಳಾವಕಾಶ ನೀಡಬೇಕು ಮತ್ತು ಧಾರವಾಡ ಮಿನಿವಿಧಾನಸೌಧದಲ್ಲಿ ಸ್ವಚ್ಚತಾ ಕಾರ್ಯವನ್ನು ನಿರಂತರವಾಗಿ ಕೈಗೊಳ್ಳಲು ವಿನಂತಿಸಿದರು.

ನೌಕರ ಸಂಘದ ಜಿಲ್ಲಾ ಪ್ರದಾನ ಕಾರ್ಯದರ್ಶಿ ಎಸ್.ಜಿ ಸುಬ್ಬಾಪುರಮಠ ಅವರು ಮಾತನಾಡಿ ವಾಣಿಜ್ಯ ತೆರಿಗೆ ಇಲಾಖೆ ಕಟ್ಟಡದಲ್ಲಿ ಅಧಿಕಾರಿ,ಸಿಬ್ಬಂದಿಗಳಿಗೆ ಹೆಚ್ಚಿನ ಸ್ಥಳಾವಕಾಶ ಕಲ್ಪಿಸಬೇಕೆಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಬಿ.ಸಿ.ಕರಿಗೌಡರ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಿವಕುಮಾರ ಮಾನಕರ,ಉಪ ಪೊಲೀಸ್ ಅಧೀಕ್ಷಕ ಚಂದ್ರಕಾಂತ ಪೂಜಾರಿ,ಎಸಿಪಿ ವಿಜಯಕುಮಾರ ತಳವಾರ,ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎನ್.ಆರ್.ಪುರುಷೋತ್ತಮ,ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತ ನಿಂಗಪ್ಪ ಕುಮ್ಮಣ್ಣವರ,ಪಶು ಸಂಗೋಪನ ಇಲಾಖೆ ಉಪ ನಿರ್ದೇಶಕ ಉಮೇಶ ಕೊಂಡಿ,ಅಬಕಾರಿ ಜಿಲ್ಲಾ ಉಪ ಆಯುಕ್ತ ಕೆ.ಪ್ರಶಾಂತಕುಮಾರ,ಖಜಾನೆ ಇಲಾಖೆ ಉಪ ನಿರ್ದೇಶಕಿ ವೈ.ವೈ.ಹೊನ್ನಳ್ಳಿ, ಇಎಸ್‍ಐ ಆಸ್ಪತ್ರೆ, ಕೃಷಿ ಇಲಾಖೆ, ಲೋಕೋಪಯೋಗಿ ಇಲಾಖೆ, ಮಹಾನಗರ ಪಾಲಿಕೆ, ನೀರಾವರಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ನೌಕರರ ಸಂಘದ ಜಿಲ್ಲಾ ಗೌರವಾಧ್ಯಕ್ಷ ರಮೇಶ ಲಿಂಗದಾಳ, ರಾಜ್ಯ ಪರಿಷತ್ತ ಸದಸ್ಯ ದೇವಿದಾಸ ಶಾಂತಿಕರ ಮತ್ತು ಆರ್.ಆರ್.ಬಿರಾದಾರ, ವೈ.ಎಚ್.ಬಣವಿ, ರಾಜಶೇಖರ ಹೊನ್ನಪ್ಪನವರ, ಖಜಾಂಚಿ ರಾಜಶೇಖರ ಬಾಣದ, ಕಾರ್ಯದರ್ಶಿ ಮಂಜುನಾಥ ಯಡಹಳ್ಳಿ,ಗಿರೀಶ ಚೌಡಕಿ,ಕ್ರೀಡಾ ಕಾರ್ಯದರ್ಶಿ ಮಲ್ಲಿಕಾರ್ಜುನ ಸೋಲಗಿ, ತಾಲೂಕಾ ಅಧ್ಯಕ್ಷರಾದ ಪ್ರಹ್ಲಾದ ಗೆಜ್ಜಿ, ಆರ್.ಎಂ ಹೊಲ್ತಿ ಕೋಟಿ, ವ್ಹಿ.ಎಫ್.ಚುಳಕಿ, ಎ.ಬಿ.ಕೊಪ್ಪದ ಮತ್ತು ರಾಜಶೇಖರ ಕೋನರೆಡ್ಡಿ, ಡಾ.ಸುರೇಶ ಹಿರೇಮಠ, ಅಮಿತ ಕಲ್ಯಾಣಶೆಟ್ಟರ, ಕುಮಾರ ಪಡೆಪ್ಪನವರ ಸೇರಿದಂತೆ ನೌಕರರ ಸಂಘದ ಪದಾಧಿಕಾರಿಗಳು ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ ಮಾತನಾಡಿದರು.


Google News

 

 

WhatsApp Group Join Now
Telegram Group Join Now
Suddi Sante Desk