ಬೆಂಗಳೂರು –
ಅನಾರೋಗ್ಯದಿಂದ ಬಳಲುತ್ತಿದ್ದ ನಟ ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ ಅವರು ಇಂದು ಕೊನೆಯುಸಿರೆಳೆದಿದ್ದಾರೆ.ಬ್ರೇನ್ ಸ್ಟ್ರೋಕ್ ಆದ ಕಾರಣ ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮನವರ ಆರೋಗ್ಯ ತೀವ್ರ ಹದಗೆ ಟ್ಟಿತ್ತು.ಈ ಹಿನ್ನೆಲೆಯಲ್ಲಿ ಕಳೆದ 20 ದಿನಗಳಿಂದ ಮನೆಯಲ್ಲೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿತ್ತು. ದಿನನಿತ್ಯ ಮನೆಗೆ ಬಂದು ವೈದ್ಯರು ಚಿಕಿತ್ಸೆ ನೀಡು ತ್ತಿದ್ರು.ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಕೋವಿಡ್ ನಿಂದಾಗಿ ದುನಿಯಾ ವಿಜಯ್ ತಾಯಿ ಚೇತರಿಸಿಕೊಂಡಿದ್ದರು. ಇನ್ನೇನು ಸಮಸ್ಯೆ ಬಗೆಹರಿಯಿತು ಎನ್ನುತ್ತಿರು ವಾಗಲೇ ಮತ್ತೆ ಅವರ ಆರೋಗ್ಯ ಹದಗೆಟ್ಟಿತ್ತು. ಅಮ್ಮನಿಗೆ ಆಸ್ಪತ್ರೆಗೆ ಹೋಗಲು ಇಷ್ಟವಿರಲಿಲ್ಲ. ಹೀಗಾಗಿ ಮನೆಯಲ್ಲೇ ಚಿಕಿತ್ಸೆಗೆ ವ್ಯವಸ್ಥೆ ಮಾಡಿಸಿ ದ್ದೇನೆ ಎಂದು ವಿಜಯ್ ಹೇಳಿದ್ದರು ಇದರ ನಡುವೆ ಇವರು ಚಿಕಿತ್ಸೆ ಫಲಿಸದೇ ನಿಧನರಾಗಿದ್ದು ಚಿತ್ರರಂಗ ದ ಸಮಸ್ತ ಬಳಗವು ಕಂಬನಿಯನ್ನು ಮೀಡಿದಿದೆ