ಹುಬ್ಬಳ್ಳಿ- ಧಾರವಾಡ
ನವಂಬರ್ 22 ರಂದು ನಡೆಯಲಿರುವ ಪೊಲೀಸ್ ಇಲಾಖೆಯ ವಿಶೇಷ ಮೀಸಲು ಪೊಲೀಸ್ ಕಾನ್ಸ್ಟೇಬಲ್ (KSRS-IRB) ಪುರುಷ ಮತ್ತು ಮಹಿಳಾ ಹುದ್ದೆಗಳ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ.ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿನ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು ಹೀಗಾಗಿ ನಾಳೆ ಹೆಚ್ಚವರಿ ಬಸ್ ಗಳ ವ್ಯವಸ್ಥೆಯನ್ನು ಸಾರಿಗೆ ಇಲಾಖೆ ಮಾಡಿದೆ.
ಪರೀಕ್ಷೆ ಮುಗಿದ ನಂತರ ಅಭ್ಯರ್ಥಿಗಳು ತಮ್ಮ ಊರುಗಳಿಗೆ ತೆರಳಲು ಮಧ್ಯಾಹ್ನದಿಂದ ಹೆಚ್ಚಿನ ಸಂಚಾರ ದಟ್ಟಣೆಯನ್ನು ಇಲಾಖೆ ನಿರೀಕ್ಷಿಸಿದ್ದು ಹೀಗಾಗಿ ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ ಹೆಚ್ಚುವರಿ ಬಸ್ಸುಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ.ಗದಗ,ಕೊಪ್ಪಳ,ರಾಯಚೂರು, ಬಾಗಲಕೋಟೆ, ವಿಜಯಪುರ ಕಡೆಗೆ ಹೋಗುವ ಬಸ್ಸುಗಳು ಹೊಸೂರು ಪ್ರಾದೇಶಿಕ ಬಸ್ ನಿಲ್ದಾಣದಿಂದ ಹೊರಡುತ್ತವೆ. ಹಾಗೇ ಬೆಳಗಾವಿ, ಶಿರಸಿ, ಯಲ್ಲಾಪುರ, ಕಾರವಾರ, ದಾವಣಗೆರೆ, ಶಿವಮೊಗ್ಗ ಕಡೆಗೆ ಹೋಗುವ ಬಸ್ಸುಗಳು ಗೋಕುಲ ರಸ್ತೆಯ ಹೊಸ ಬಸ್ ನಿಲ್ದಾಣದಿಂದ ಹೊರಡುತ್ತವೆ.
ಇನ್ನೂ ಶಿರಹಟ್ಟಿ,ನವಲಗುಂದ,ಅಣ್ಣಿಗೇರಿ, ಕಲಘಟಗಿ, ಕುಂದಗೋಳ,ತಡಸ ಮತ್ತಿತರ ಗ್ರಾಮೀಣ ಪ್ರದೇಶಗಳ ಬಸ್ಸುಗಳು ಹಳೆ ಬಸ್ ನಿಲ್ದಾಣದಿಂದ ಹೊರಡುತ್ತವೆ ಎಂದು ವಾ.ಕ.ರ.ಸಾ.ಸಂಸ್ಥೆ, ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ. ಇನ್ನೂ ಇದರೊಂದಿಗೆ ಪರೀಕ್ಷೆ ಮುಗಿದ ನಂತರವೂ ಜನದಟ್ಟಣೆಯನ್ನು ನೋಡಿಕೊಂಡು ಬಸ್ ಗಳನ್ನು ಅವಶ್ಯಕತೆ ತಕ್ಕಂತೆ ಓಡಿಸಲಾಗುತ್ತದೆ ಅಲ್ಲದೇ ಯಾವುದೇ ತೊಂದರೆಯಾಗದಂತೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ ಎಂದು ಇಲಾಖೆಯ ಅಧಿಕಾರಿಗಳು ಹೇಳಿದರು. ಇದರೊಂದಿಗೆ ಅವಳಿ ನಗರದಲ್ಲಿ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಬರಲು ಕೂಡಾ ಸಾಕಷ್ಟು ಬಸ್ ಗಳ ಸಂಚಾರಕ್ಕೇ ವ್ಯವಸ್ಥೆ ಮಾಡಿಕೊಳ್ಳಲಾಗಿದ್ದು ಇದರ ಉಪಯೋಗವನ್ನು ಪಡೆದುಕೊಳ್ಳುವಂತೆ ಪರೀಕ್ಷೆಗೆ ಬರುವ ಅಭ್ಯರ್ಥಿಗಳು ಪಡೆದುಕೊಳ್ಳಲು ಅಧಿಕಾರಿಗಳು ಸೂಚಿಸಿದ್ದಾರೆ.