ಬೆಂಗಳೂರು –
ಶಾಲಾ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಹಾಲ್ ಟಿಕೆಟ್ ನಿರಾಕರಿಸುವಂತಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.ಸದನದಲ್ಲಿ ಶಾಸಕ ಆರ್.ರಂಗನಾಥ್ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು ಖಾಸಗಿ ಅನುದಾನಿತ ಶಾಲೆಗಳಲ್ಲಿ ಶುಲ್ಕ ಬಾಕಿ ಉಳಿಸಿಕೊಂಡ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ನಿರಾಕರಿಸಬಾರದು.ಶಿಕ್ಷಣ ಇಲಾಖೆ ಅಧಿಕಾರಿಗಳ ಮೂಲಕ ಆಯಾ ಜಿಲ್ಲೆಗಳ ಶಿಕ್ಷಣ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ ಎಂದರು
ಹಾಲ್ ಟಿಕೆಟ್ ಕೊಡದೇ ವಿದ್ಯಾರ್ಥಿಗಳನ್ನು ಹೊರಗೆ ನಿಲ್ಲಿಸಲಾಗುತ್ತಿದ್ದು ಕೆಲವು ಶಾಲೆಗಳಲ್ಲಿ ಬೆದರಿಕೆ ಹಾಕಲಾ ಗುತ್ತಿದೆ.ಪೋಷಕರು,ವಿದ್ಯಾರ್ಥಿಗಳು ಸಂಕಷ್ಟದ ಬಗ್ಗೆ ಗಮನ ಹರಿಸಬೇಕೆಂದು ಶಾಸಕ ಆರ್.ಮಂಜುನಾಥ್ ಒತ್ತಾಯಿಸಿದಾಗ ಸಚಿವರು ಪ್ರತಿಕ್ರಿಯೆ ನೀಡಿ ಶುಲ್ಕ ಪಾವತಿ ಸದೆ ಬಾಕಿ ಉಳಿಸಿಕೊಂಡ ವಿದ್ಯಾರ್ಥಿಗಳು ಪರೀಕ್ಷೆ ಬರೆ ಯಲು ಹಾಲ್ ಟಿಕೆಟ್ ನಿರಾಕರಿಸುವಂತಿಲ್ಲ ಎಂದು ಹೇಳಿದ್ದಾರೆ.