ಬೆಂಗಳೂರು –
ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಾಗಲೇ ಮಾಜಿ ಮುಖ್ಯಮಂತ್ರಿ ಸಿದ್ದರಾ ಮಯ್ಯ ಕೊನೆಗೂ ತಾವು ಸ್ಪರ್ಧೆ ಮಾಡುವ ಕ್ಷೇತ್ರದ ಹೆಸರನ್ನು ಘೋಷಣೆ ಮಾಡಿದ್ದಾರೆ. ಹೌದು ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬರುವ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ.ಈ ಒಂದು ಘೋಷಣೆಯನ್ನು ಘೋಷಿಸುತ್ತಿದ್ದಂತೆ ಇತ್ತ ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಎಂ.ಆರ್.ಸೀತಾ ರಾಮ್ ಅವರನ್ನು ಕೋಲಾರ ಜಿಲ್ಲಾ ಕಾಂಗ್ರೆಸ್ ಸಮಿತಿ ಉಸ್ತುವಾರಿ ಉಪಾಧ್ಯಕ್ಷರನ್ನಾಗಿ ಈ ಒಂದು ಕೋಲಾರ ಕ್ಷೇತ್ರಕ್ಕೆ ಉಸ್ತುವಾರಿಯನ್ನು ನೇಮಕ ಮಾಡಿ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ ನಿಯೋಜಿಸಿದ್ದಾರೆ.
ಎಂ.ಆರ್ ಸೀತಾರಾಮ್ ಅವರನ್ನು ಈ ಮುನ್ನ ಕೋಲಾರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕೆಪಿಸಿಸಿ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.ಕೋಲಾರ ಡಿಸಿಸಿ ಅಧ್ಯಕ್ಷ ಸ್ಥಾನ ಖಾಲಿ ಇದ್ದ ಕಾರಣದಿಂದ ಕೆಪಿಸಿಸಿ ಉಪಾಧ್ಯಕ್ಷರಾದ ಎಂ.ನಾರಾಯಣ ಸ್ವಾಮಿ ಅವರನ್ನು ಹೆಚ್ಚುವರಿಯಾಗಿ ಕೋಲಾರ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಉಸ್ತುವಾರಿಯಾಗಿ ನಿಯೋಜಿಸಲಾಗಿತ್ತು.ಆದರೆ ಇದೀಗ ಈ ಹಿಂದೆ ನೇಮಿಸಿದಂತೆ ಕೋಲಾರ ಜಿಲ್ಲಾ ಕಾಂಗ್ರೆಸ್ ಸಮಿತಿ ಉಸ್ತುವಾರಿ ಉಪಾಧ್ಯಕ್ಷರಾಗಿ ಮುಂದು ವರೆದು ಕಾರ್ಯನಿರ್ವಹಿಸಲಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..