ಬೆಂಗಳೂರು –
ಅಕ್ಟೋಬರ್ ನಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರದ ಮಾದರಿಯ ವೇತನ ಪರಿಷ್ಕರಣೆಗೆ ವೇತನ ಆಯೋಗ ರಚಿಸುವ ಕುರಿತು ಮುಖ್ಯಮಂತ್ರಿ ಘೋಷಣೆ ಬೆನ್ನಲ್ಲೇ ಈಗ ರಾಜ್ಯದ ಸರ್ಕಾರಿ ನೌಕರರು ಮತ್ತೊಂದು ಪ್ರಮುಖ ಬೇಡಿಕೆ ಗೆ ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ವಿವಿಧ ಇಲಾಖೆ ಮತ್ತು ವೃಂದ ಸಂಘಟನೆಗಳ ಒಕ್ಕೂಟದ ಜಂಟಿ ಕ್ರಿಯಾ ಸಮಿತಿ ವೇತನ ಆಯೋಗ ರಚನೆಗೆ ಒತ್ತಾಯಿಸಿದೆ.ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಅಧ್ಯಕ್ಷ ಜೆ. ಕುಮಾರ್ ಸಚಿವಾಲಯ ನೌಕರರ ಸಂಘದ ಅಧ್ಯಕ್ಷ ಪಿ.ಗುರುಸ್ವಾಮಿ,ರಾಜ್ಯ ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷ ಶಾಂತರಾಮ್ ತೇಜ್ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 6ನೇ ವೇತನ ಆಯೋಗದ ಶಿಫಾರಸುಗಳ ಪರಿಷ್ಕರಣೆ ಅವಧಿ ಮುಕ್ತಾಯವಾಗಿದ್ದು 7ನೇ ವೇತನ ಆಯೋಗ ರಚಿಸಬೇಕು. ಮಧ್ಯಂತರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.