ಬೆಂಗಳೂರು –
ಶಿವಮೊಗ್ಗ ತಾಲ್ಲೂಕಿನ ಹುಣಸೋಡು ಕಲ್ಲು ಕ್ವಾರೆ ಪ್ರದೇಶದಲ್ಲಿ ಸಂಭವಿಸಿದ ಘಟನೆ ಮಾಸುವ ಮೊದಲೇ ರಾಜ್ಯದಲ್ಲಿ ಮತ್ತೊಂದು ಜಿಲೆಟಿನ್ ಸ್ಪೋಟ ದುರಂತ ಸಂಭವಿಸಿದ್ದು ಘಟನೆಯಲ್ಲಿ ಆರಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಳ್ಳಿ ಗ್ರಾಮದ ಬಳಿ ಜಿಲೆಟಿನ್ ಸ್ಫೋಟಗೊಂಡಿದೆ. ಗುಡಿಬಂಡೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ 12 ಗಂಟೆಗೆ ಭಾರೀ ಸ್ಪೋಟ ಸಂಭವಿಸಿ ಆರಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.

ಆರೋಗ್ಯ ಸಚಿವ ಡಿ ಸುಧಾಕರ್ ತವರು ಕ್ಷೇತ್ರದಲ್ಲಿ ಈ ಒಂದು ಸ್ಟೋಟ ಸಂಭವಿಸಿದ್ದು ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು,ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸ್ಪೋಟದ ತೀವ್ರತೆಗೆ ಹತ್ತಾರು ಕಿಲೋಮೀಟರ್ ದೂರದವರೆಗೂ ಭೂಮಿ ಕಂಪಿಸಿದೆ ಇನ್ನೂ ಪ್ರಮುಖವಾಗಿ ಇದು ಜಿ ಎಸ್ ನಾಗರಾಜ್ ಗೆ ಸೇರಿದ ಕಲ್ಲು ಕ್ವಾರಿಯಾಗಿದ್ದು ಇವರನ್ನು ಈಗಾಗಲೇ ಪೊಲೀಸರು ಬಂಧನ ಮಾಡಿದ್ದಾರೆ.