ನವದೆಹಲಿ –
ವಿಧಾನ ಪರಿಷತ್‌ಗೆ ಮೂರು ಪದವೀಧರರ ಹಾಗೂ ಮೂರು ಶಿಕ್ಷಕರ ಕ್ಷೇತ್ರಗಳಿಂದ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ.ಹೌದು ಲೋಕಸಭಾ ಚುನಾವಣೆಯ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ಚುನಾವಣೆಗೆ ವೇದಿಕೆ ಸಜ್ಜಾಗಿದೆ.
ಜೂನ್ 3ರಂದು ಮತದಾನ ನಡೆಯಲಿದೆ. ಈ ಕ್ಷೇತ್ರಗಳಲ್ಲಿ ಮಾದರಿ ನೀತಿಸಂಹಿತೆ ತಕ್ಷಣದಿಂದ ಜಾರಿಗೆ ಬಂದಿದೆ.ಈಶಾನ್ಯ ಪದವೀಧರ ಕ್ಷೇತ್ರ ದಿಂದ ಡಾ.ಚಂದ್ರಶೇಖರ ಬಿ.ಪಾಟೀಲ, ಬೆಂಗಳೂರು ಪದವೀಧರ ಕ್ಷೇತ್ರದಿಂದ ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವೈ.ಎ.ನಾರಾಯಣಸ್ವಾಮಿ, ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಎಸ್.ಎಲ್.ಭೋಜೇಗೌಡ ಅವರ ಅವಧಿ ಜೂನ್ 21ಕ್ಕೆ ಕೊನೆ ಆಗಲಿದೆ.
ನೈರುತ್ಯ ಪದವೀಧರರ ಕ್ಷೇತ್ರದಿಂದ ಬಿಜೆಪಿ ಯಿಂದ ಆಯ್ಕೆಯಾಗಿದ್ದ ಆಯನೂರು ಮಂಜುನಾಥ ತಮ್ಮ ಸ್ಥಾನಕ್ಕೆ 2023ರ ಏಪ್ರಿಲ್ 19ರಂದು ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್‌ನಿಂದ ಆಯ್ಕೆಯಾಗಿದ್ದ ಮರಿತಿಬ್ಬೇಗೌಡ ಈ ವರ್ಷದ ಮಾರ್ಚ್ 21ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.
ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ರಾಮೋಜಿ ಗೌಡ ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಕೆ.ಕೆ. ಮಂಜುನಾಥ್ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಡಿ.ಟಿ. ಶ್ರೀನಿವಾಸ್, ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಡಾ. ಚಂದ್ರಶೇಖರ ಪಾಟೀಲ ಹಾಗೂ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಆಯನೂರು ಮಂಜುನಾಥ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ.
ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಮರಿತಿಬ್ಬೇಗೌಡ ಅವರನ್ನು ಅಭ್ಯರ್ಥಿಯನ್ನಾಗಿ ಮಾಡುವ ಸಂಭವ ಇದೆ.ಬಿಜೆಪಿಯ ರಾಜ್ಯ ಘಟಕವು ಆರು ಕ್ಷೇತ್ರ ಗಳಿಗೆ ಸಂಭಾವ್ಯ ಅಭ್ಯರ್ಥಿಗಳ ಹೆಸರನ್ನು ಶಿಫಾರಸು ಮಾಡಿ ಎರಡು ತಿಂಗಳು ಕಳೆದಿವೆ.
ಬಿಜೆಪಿ ವರಿಷ್ಠರು ಈ ಬಗ್ಗೆ ಇನ್ನೂ ತೀರ್ಮಾನ ತೆಗೆದುಕೊಂಡಿಲ್ಲ. ಈ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಇರಲಿದೆಯೇ ಎಂಬುದು ಸ್ಪಷ್ಟಗೊಂಡಿಲ್ಲ.ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ ಎ.ಎಚ್.ಆನಂದ್ ಹಾಗೂ ಅ.ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ವೈ.ಎ.ನಾರಾಯಣಸ್ವಾಮಿ, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಈ.ಸಿ.ನಿಂಗರಾಜಗೌಡ ಹಾಗೂ ವಿನಯ್,
ಈಶಾನ್ಯ ಪದವೀಧರರ ಕ್ಷೇತ್ರಕ್ಕೆ ಅಮರನಾಥ ಪಾಟೀಲ, ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಡಾ.ಸರ್ಜಿ ಹಾಗೂ ವಿಕಾಸ್ ಪುತ್ತೂರು ಮಂಚೂಣಿಯಲ್ಲಿದೆ ಎಂದು ಮೂಲಗಳು ಹೇಳಿದ್ದು ಏನೇನಾಗಲಿದೆ ಎಂಬೊದನ್ನು ಕಾದು ನೋಡಬೇಕಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು……