ಇಂಡಿ –
ಶಾಲೆಯ ಮುಖ್ಯ ಗುರುಗಳ ಅಮಾನತಿಗಾಗಿ ಆಗ್ರಹಿಸಿ ವಿದ್ಯಾರ್ಥಿಗಳು ತರಗತಿಗೆ ಹೋಗದೆ ಪ್ರತಿಭಟಿಸಿದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಗೊರನಾಳ ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆದಿದೆ.

ಹೌದು ಶಾಲೆಯ ಮುಖ್ಯ ಶಿಕ್ಷಕರು ಸುಖಾ ಸುಮ್ಮನೆ ಪಾಲಕರ ಮತ್ತು ಶಿಕ್ಷಕರ ಮೇಲೆ ಸುಳ್ಳು ಆರೊಪ ಮಾಡಿ ದೂರು ದಾಖಲು ಮಾಡಿದ್ದಾರೆ ಎಂದು ಆರೋಪಿಸಿದ ವಿದ್ಯಾರ್ಥಿಗಳು ಕೂಡಲೇ ದೂರು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.ಬೆಳಿಗ್ಗೆಯಿಂದ ವಿದ್ಯಾರ್ಥಿಗಳು ಮುಖ್ಯ ಶಿಕ್ಷಕರನ್ನು ಅಮಾನತುಗೊಳಿಸಬೇಕೆಂದು ಅನ್ನ ನೀರು ಬಿಟ್ಟು ಪ್ರತಿಭಟನೆ ನಡೆಸಿದರು.ಇತ್ತ ವಿದ್ಯಾರ್ಥಿ ಗಳು ಪ್ರತಿಭಟನೆ ಮಾಡುತ್ತಿದ್ದರೆ ಅತ್ತ ವಿಷಯ ತಿಳಿದ ಶಿಕ್ಷಣ ಇಲಾಖೆ ಹಾಗೂ ತಾಲೂಕು ಆಡಳಿತ ಅಧಿಕಾರಿಗಳ ಗಮನಕ್ಕೆ ಬಂದಿದ್ದರೂ ಪ್ರತಿಭಟನಾ ಸ್ಥಳಕ್ಕೆ ಯಾರೊ ಬ್ಬರೂ ಬಾರದಿರುವುದು ಮಾತ್ರ ವಿಪರ್ಯಾಸದ ಸಂಗತಿಯಾಗಿದೆ.