ಬಿಸಿಯೂಟ ಕ್ಕೆ ಇನ್ನೂ ಮುಂದೆ ಸಿರಿ ಧಾನ್ಯಗಳ ವಿತರಣೆ – ಕೃಷಿ ಸಚಿವ ಬಿ ಸಿ ಪಾಟೀಲ ಮಾಹಿತಿ

Suddi Sante Desk

ಬೆಂಗಳೂರು –

ರಾಜ್ಯದ ಶಾಲಾ ಮಕ್ಕಳ ಮಧ್ಯಾಹ್ನದ ಬಿಸಿಯೂಟಕ್ಕೆ ಸಿರಿಧಾನ್ಯ ನೀಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು.ಹೊಸದುರ್ಗ ತಾಲ್ಲೂಕಿನ ಸಾಣೆಹಳ್ಳಿ ತರಳಬಾಳು ಶಾಖಾಮಠದಲ್ಲಿ ಆಯೋಜಿಸಿದ್ದ ಶಿವ ಸಂಚಾರ ನಾಟಕೋತ್ಸವದ ಬೆಳ್ಳಿ ಹಬ್ಬದ ಸಮಾರಂಭದಲ್ಲಿ ಮಾತನಾಡಿದ ಅವರು ಶಾಲಾ ಮಕ್ಕಳ ಬಿಸಿಯೂಟಕ್ಕೆ ಸಿರಿಧಾನ್ಯಗಳನ್ನು ನೀಡಲಾಗುವುದು.2023ಕ್ಕೆ ಅಂತಾರಾ ಷ್ಟ್ರೀಯ ಮಟ್ಟದ ಸಿರಿಧಾನ್ಯ ಮೇಳ ಏರ್ಪಡಿಸಲಾಗು ವುದು ಎಂದರು

ಪ್ರಸ್ತುತ ಪರಿಸ್ಥಿತಿಯಲ್ಲಿ ಸಾವಯವ ಕೃಷಿ ಅಗತ್ಯವಾಗಿದ್ದು ಬೆಳೆಗಳಿಗೆ ವೈಜ್ಞಾನಿಕ ಬೆಲೆ ಸಿಗಬೇಕು‌ ಇದಕ್ಕಾಗಿ ಸರ್ಕಾರ ಉತ್ಪಾದಕ ಸಂಸ್ಥೆ ಸ್ಥಾಪಿಸುವ ಮೂಲಕ ಕೃಷಿಕರಿಗೆ ಬೆಂಬಲ ನೀಡುತ್ತಿದೆ ಈ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಆತ್ಮನಿರ್ಭರ್ ಅಡಿ 10 ಕೋಟಿ ರೂ. ಮೀಸಲಿಟ್ಟಿ ದ್ದಾರೆಂದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.