ಬೆಂಗಳೂರು –
ರಾಜ್ಯದ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ ಹೌದು ದಸರಾ ಹಾಗೂ ದೀಪಾವಳಿ ಗಿಫ್ಟ್ ಎನ್ನುವಂತೆ ತುಟ್ಟಿಭತ್ಯೆಯನ್ನು ಶೇ.3.75ರಷ್ಟು ಹೆಚ್ಚಳ ಮಾಡಲಾಗಿತ್ತು ಇದೀಗ ಸಿಎಂ ಬೊಮ್ಮಾಯಿಯವರು ಜುಲೈ 1, 2022 ರಿಂದಲೇ ಜಾರಿಗೆ ಬರುವಂತೆ ಶೇ.3.75ರಷ್ಟು ಹೆಚ್ಚಳಕ್ಕೆ ಅನುಮೋದನೆ ನೀಡಿದ್ದಾರೆ.ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿಯನ್ನು ನೀಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರು ಅವರು ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆಯನ್ನು ದಿ. 1ನೇ ಜುಲೈ 2022 ರಿಂದ ಅನ್ವಯವಾಗುವಂತೆ 3.75% ನಷ್ಟು ಹೆಚ್ಚಿಸಿಲು ಅನುಮೋದಿಸಿದ್ದಾರೆ. ಇದಕ್ಕಾಗಿ ಸರ್ಕಾರ ಹೆಚ್ಚುವರಿಯಾಗಿ ರೂ 1,282.72 ಕೋಟಿ ರೂ. ಭರಿಸಲಿದೆ ಎಂದು ತಿಳಿಸಿದೆ.
ಇನ್ನೂ ಈ ಒಂದು ತುಟ್ಟಿ ಭತ್ಯೆ ಹೆಚ್ಚಳ ಮಾಡಿದ ರಾಜ್ಯದ ಮುಖ್ಯಮಂತ್ರಿ ಅವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಅವರು ರಾಜ್ಯದ ಸರ್ಕಾರಿ ನೌಕರರ ಪರವಾಗಿ ಧನ್ಯವಾದ ಗಳನ್ನು ಹೇಳಿದ್ದಾರೆ.ಇತ್ತ ಷಡಾಕ್ಷರಿ ಅವರ ಅಭಿಮಾನಿ ಬಳಗದ ರಾಜ್ಯ ಸಂಚಾಲಕ ಬೂದನೂರ ಮಹೇಶ್ ಮಂಡ್ಯ ಸೇರಿದಂತೆ ಸರ್ವ ಸದಸ್ಯರು ಒತ್ತಾಯ ಮಾಡಿದ್ದರು.