This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ಇಂದಿನಿಂದ PUC ದ್ವಿತೀಯ ಪರೀಕ್ಷೆ – ಪರೀಕ್ಷಾ ನಿಯಮಗಳ ಕುರಿತಂತೆ ಒಂದಿಷ್ಟು ಮಾಹಿತಿ – ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ರಾಜ್ಯದ ಸಮಸ್ತ ಶಿಕ್ಷಕ ಬಂಧುಗಳಿಂದ ಸರ್ಕಾರಿ ನೌಕರರ ಟೀಮ್ ನಿಂದ ಶುಭವಾಗಲಿ ಆಲ್ ದಿ ಬೆಸ್ಟ್…..

WhatsApp Group Join Now
Telegram Group Join Now

ಬೆಂಗಳೂರು

ಇಂದಿನಿಂದ PUC ದ್ವಿತೀಯ ಪರೀಕ್ಷೆ – ಪರೀಕ್ಷಾ ನಿಯಮಗಳ ಕುರಿತಂತೆ ಒಂದಿಷ್ಟು ಮಾಹಿತಿ – ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ರಾಜ್ಯದ ಸಮಸ್ತ ಶಿಕ್ಷಕ ಬಂಧುಗಳಿಂದ ಸರ್ಕಾರಿ ನೌಕರರ ಟೀಮ್ ನಿಂದ ಶುಭವಾಗಲಿ ಆಲ್ ದಿ ಬೆಸ್ಟ್

ಹೌದು ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ವರ್ಷದ ಪಿಯುಸಿ ಪರೀಕ್ಷೆಗಳು ಆರಂಭಗೊಂ ಡಿವೆ.ಇನ್ನೂ ಪರೀಕ್ಷೆಯ ವೇಳಾಪಟ್ಟಿ ಪರೀಕ್ಷಾ ನಿಯಮಗಳು ಕುರಿತಂತೆ ನೊಡೊದಾದರೆ 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 1 ರ ಇಂದಿನಿಂದ ಆರಂಭಗೊಂಡಿವೆ.ರಾಜ್ಯದಾತ್ಯಂತ 1124 ಕೇಂದ್ರಗಳಲ್ಲಿ 6.98 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.ಮೊದಲ ದಿನ ಕನ್ನಡ ಮತ್ತು ಅರೇಬಿಕ್ ವಿಷಯದ ಪರೀಕ್ಷೆಗಳು ನಡೆಯಲಿದೆ.

ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿ ಯಲ್ಲಿ ಇರುತ್ತದೆ.ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯು ತ್ತಾರೆ.ಇನ್ನು ಉಳಿದ 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗು ತ್ತದೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಪರೀಕ್ಷಾ ಕೇಂದ್ರದಲ್ಲಿ ಈ ನಿಯಮಗಳ ಪಾಲನೆ ಕಡ್ಡಾಯ.ವಿದ್ಯಾರ್ಥಿಗಳು, ಸರಳ ಕ್ಯಾಲ್ಕುಲೇಟರ್ ದೊಂದಿಗೆ ಸ್ಟ್ರಾಟಿಸ್ಟಿಕ್ಸ್ ವಿಷಯದಲ್ಲಿ ಮಾತ್ರ ಸೈಂಟಿಫಿಕ್ ಕ್ಯಾಲ್ಕುಲೇಟರ್ ಬಳಸಲು ಅನುಮತಿ ಪರೀಕ್ಷೆಯ ಅಂತಿಮ ಬೆಲ್ ಹೊಡೆ ಯುವ ಮುನ್ನ ಪರೀಕ್ಷಾ ಕೊಠಡಿಯಿಂದ ಹೊರಡುವ ವಿದ್ಯಾರ್ಥಿಗಳಿಂದ ಉತ್ತರ ಪತ್ರಿಕೆ ಮತ್ತು ಪ್ರಶ್ನೆ ಪತ್ರಿಕೆಗಳನ್ನು ಕಡ್ಡಾಯವಾಗಿ ಪಡೆಯಲಾಗುತ್ತದೆ.

ಗುರುತಿನ ಚೀಟಿ ಹಾಗೂ ಹಾಲ್ ಟಿಕೆಟ್ ಕಡ್ಡಾಯ
ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪ್ರವೇಶ ಪತ್ರ ತೋರಿಸಿ ಬಿಎಂಟಿಸಿ ಹಾಗೂ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ.
ಮೊಬೈಲ್ ಫೋನ್,ಎಲೆಕ್ಟ್ರಿಕಲ್ ಉಪಕರಣಗಳ ಬಳಕೆಯನ್ನು ನಿಷೇಧ ಮಾಡಲಾಗಿದೆ.
ಪರೀಕ್ಷಾ ಅವಧಿಗಿಂತ ಮುಂಚೆ ಹೊರಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ನೀಡಲಾಗುವುದಿಲ್ಲ.
ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ
ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ.ಮೊಬೈಲ್ ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಪತ್ರ ಪಡೆದ ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಲಾಗಿದೆ.ನಕಲು ಮಾಡುವ ಸಾಮಗ್ರಿಗಳನ್ನು ಹಾಗೂ ಹೊರಗಿನಿಂದ ಕಾಪಿ ಬರೆದು ಪರೀಕ್ಷಾ ಕೇಂದ್ರಗಳಲ್ಲಿ ಪೂರೈಸುವುದನ್ನು ನಿರ್ಬಂಧಿಸಲಾಗಿದೆ.200 ಮೀಟರ್ ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ.
ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ,ಕೆಎಸ್‌ ಆರ್‌ ಟಿಸಿ ಬಸ್‌ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವನ್ನು ನೀಡಲಾಗಿದೆ.ಮಾರ್ಚ್‌ 1 ರಿಂದ ಮಾರ್ಚ್‌ 22 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು ಈ ಒಂದು ಅವಧಿಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಬಿಎಂಟಿಸಿ, ಕೆಎಸ್‌ ಆರ್‌ ಟಿಸಿಯ ನಗರ, ಹೊರ ವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ
ಪರೀಕ್ಷೆಗಳು ಬೆಳಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿ 1.30ಕ್ಕೆ ಮುಕ್ತಾಯವಾಗಲಿವೆ.
01-03-2024 : ಶುಕ್ರವಾರ ಕನ್ನಡ ಹಾಗೂ ಅರೇಬಿಕ್
04-03-2024 : ಸೋಮವಾರ ಗಣಿತ
05-03-2024 : ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ
06-03-2024 : ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್ ಪರೀಕ್ಷೆ
07-03-2024 : ಇತಿಹಾಸ ಹಾಗೂ ಭೌತಶಾಸ್ತ್ರ
09-03-2024 : ಐಚ್ಛಿಕ ಕನ್ನಡ,ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ,ಗೃಹ ವಿಜ್ಞಾನ
11-03-2024 : ತರ್ಕಶಾಸ್ತ್ರ,ವ್ಯವಹಾರ ಅಧ್ಯಯನ ಪರೀಕ್ಷೆ
13-03-2024 : ಇಂಗ್ಲಿಷ್ ಪರೀಕ್ಷೆ
15-03-2024 : ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ ಪರೀಕ್ಷೆ
16-03-2024 : ಅರ್ಥಶಾಸ್ತ್ರ
18-03-2024 ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ
20-03-2024 : ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
22-03-2024 : ಹಿಂದಿ ಪರೀಕ್ಷೆ

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk