ಚನೈ –
ವಿಶ್ವಕಪ್ ಕ್ರಿಕೆಟ್ ಆರಂಭಗೊಂಡಿದ್ದು ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ನಡೆದ ಮೊದಲ ಪಂದ್ಯದಲ್ಲಿ ಭಾರತ ತಂಡ ಗೆಲುವು ಸಾಧಿಸಿದೆ.ಹೌದು ಚೆನೈ ನ ಚಿದಂಬರಂ ಮೈದಾನ ದಲ್ಲಿ ನಡೆದ ಪಂದ್ಯದಲ್ಲಿ ಭಾರತ ತಂಡವು 6 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ
ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡವನ್ನು 199 ರನ್ ಗಳಿಗೆ ಭಾರತದ ಬೌಲರ್ ಗಳು ಕಟ್ಟಿ ಹಾಕಿದರು ನಂತರ ಬ್ಯಾಟಿಂಗ್ ಆರಂಭ ಮಾಡಿದ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಅದ್ಭುತ ಜೊತೆಯಾಟವಾ ಡಿದರು 4ನೇ ವಿಕೆಟ್ಗೆ 165 ರನ್ ಪೇರಿಸಿದ ಈ ಜೋಡಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.
ಈ ಹಂತದಲ್ಲಿ 85 ರನ್ ಬಾರಿಸಿದ್ದ ವಿರಾಟ್ ಕೊಹ್ಲಿ ಔಟಾದರು.ಏಕದಿನ ವಿಶ್ವಕಪ್ನ 5ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ದ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ದು ಕೊಂಡಿದ್ದರು.
ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡವು ಟೀಮ್ ಇಂಡಿಯಾ ಸ್ಪಿನ್ ದಾಳಿಗೆ ತತ್ತರಿಸಿತು. ಪರಿಣಾಮ 49.3 ಓವರ್ಗಳಲ್ಲಿ 199 ರನ್ಗಳಿಸಿ ಆಸ್ಟ್ರೇಲಿಯಾ ಆಲೌಟ್ ಆಗಿ 200 ರನ್ಗಳ ಸುಲಭ ಗುರಿಯನ್ನು ಬೆನ್ನತ್ತಿದ ಭಾರತ ತಂಡವು ಆರಂಭಿಕ ಆಘಾತ ನೀಡಿದರು ಆರಂಭಿಕರಾದ ಇಶಾನ್ ಕಿಶನ್ (0) ಹಾಗೂ ರೋಹಿತ್ ಶರ್ಮಾ (0) ಶೂನ್ಯಕ್ಕೆ ಔಟಾದರೆ ಆ ಬಳಿಕ ಶ್ರೇಯಸ್ ಅಯ್ಯರ್ ಕೂಡ ಸೊನ್ನೆ ಸುತ್ತಿ ನಿರ್ಗಮಿಸಿದರು.
ಈ ಹಂತದಲ್ಲಿ ಜೊತೆಗೂಡಿದ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಅದ್ಭುತ ಜೊತೆಯಾಟ ವಾಡಿದರು 4ನೇ ವಿಕೆಟ್ಗೆ 165 ರನ್ ಪೇರಿಸಿದ ಈ ಜೋಡಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ಈ ಹಂತದಲ್ಲಿ 85 ರನ್ ಬಾರಿಸಿದ್ದ ವಿರಾಟ್ ಕೊಹ್ಲಿ ಔಟಾದರು.ಇದಾಗ್ಯೂ ಅಜೇಯ 97 ರನ್ ಬಾರಿಸುವ ಮೂಲಕ ಕೆಎಲ್ ರಾಹುಲ್ ಟೀಮ್ ಇಂಡಿಯಾವನ್ನು 41.2 ಓವರ್ಗಳಲ್ಲಿ ಗುರಿ ಮುಟ್ಟಿಸಿದರು.ಈ ಮೂಲಕ ಟೀಮ್ ಇಂಡಿಯಾ ಏಕದಿನ ವಿಶ್ವಕಪ್ನ ಮೊದಲ ಪಂದ್ಯದಲ್ಲೇ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
ಸುದ್ದಿ ಸಂತೆ ನ್ಯೂಸ್ ಚೆನೈ…..