ನವದೆಹಲಿ –
ದೆಹಲಿಯಲ್ಲಿ ರೈತರ ಟ್ರ್ಯಾಕ್ಟರ್ ರ‍್ಯಾಲಿಯು ಹಿಂಸಾಚಾರಕ್ಕೆ ತಿರುಗಿದ್ದು, ಪೊಲೀಸರು ಜನರನ್ನು ನಿಯಂತ್ರಣ ಮಾಡಲು ಹರಸಾಹಸ ಪಡುತ್ತಿದ್ದಾರೆ. ಈ ನಡುವೆ ಈ ನಡುವೆ ಪೊಲೀಸ್ ಬ್ಯಾರಿಕೇಡ್‌ಗಳನ್ನು ಮುರಿದು, ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾರೆ.


ಈ ನಡುವೆ ಘಟನ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ನಿವಾಸದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ತುರ್ತು ಸಭೆಯನ್ನು ನಡೆಸುತ್ತಿದ್ದಾರೆ. ಸದ್ಯದ ಪರಿಸ್ಥಿಯ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಗೃಹ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿರುವ ಅಮಿತ್ ಶಾ, ಪರಿಸ್ಥಿತಿಯನ್ನು ಹೇಗೆ ನಿಭಾಯಿಸುವುದು, ರೈತರ ಹೋರಾಟವನ್ನು ನಿಯಂತ್ರಣ ಮಾಡುವ ಸಲುವಾಗಿ ಹೇಗೆಲ್ಲ ಕ್ರಮಗಳನ್ನು ಕೈಗೊಳ್ಳಬೇಕು?ಯಾವ ರೀತಿಯಲ್ಲಿ ವಾಪಸ್ಸು ರೈತರನ್ನು ಕಳುಹಿಸಬೇಕು

ಎನ್ನುವುದರ ಕುರಿತು ತೀವ್ರ ಚರ್ಚೆಯನ್ನು ನಡೆಸುತ್ತಿದ್ದು, ಪರಿಸ್ಥಿತಿ ಕೈ ಮೀರಿ ಹೋಗುತ್ತಿದ್ದು, ನಿಯಂತ್ರಣಕ್ಕೆ ಬರಲೇ ಬೇಕು ಇಲ್ಲವಾದಲ್ಲಿ ದೆಹಲಿಯಲ್ಲಿ ಇನ್ನೂ ಹೆಚ್ಚಿನ ಹಿಂಸಾಚರವು ನಡೆಸಲಿದ್ದು, ಇದನ್ನು ನಿಯಂತ್ರಣ ಮಾಡುವುದಕ್ಕೆ ಸಂಬಂಧಪಟ್ಟಂತೆ ಸೇನೆಯ ಸಹಾಯವನ್ನ ಪಡೆದುಕೊಳ್ಳಬಹುದು ಎನ್ನಲಾಗಿದೆ.

ಈಗಾಗಲೇ ಕೇಂದ್ರ ಭದ್ರತ ಪಡೆಗಳಿಗೆ ಸ್ಥಳದಲ್ಲಿ ಮೊಕ್ಕಂ ಹೂಡುವಂತೆ ಅಮಿತ್ ಶಾ ಹೇಳಿದ್ದಾರೆ ಎನ್ನಲಾಗಿದ್ದು, ಮುಂಜಾಗ್ರತ ಕ್ರಮಗಳನ್ನು ಕಾನೂನು ರೀತಿಯಲ್ಲಿ ನೋಡಿಕೊಳ್ಳಬೇಕು

ಯಾವುದೇ ರೀತಿಯಲ್ಲಿ ಪ್ರಾಣ ಹಾನಿಗಳಿಗೆ ಅವಕಾಶ ನೀಡಬಾರದು, ಪರಿಸ್ಥಿತಿಯನ್ನು ಶಾಂತ ರೀತಿಯಲ್ಲಿ ನಿಭಾಯಿಸಬೇಕು ಅಂತ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.