ಧಾರವಾಡ –
ಧಾರವಾಡದಲ್ಲಿ ಧರಣಿ ನಿತರ ಕಬ್ಬು ಬೆಳೆಗಾರರನ್ನು ಸಚಿವ ಆಚಾರ ಹಾಲಪ್ಪ ಮತ್ತು ಶಾಸಕ ಅಮೃತ ದೇಸಾಯಿ ಭೇಟಿ ಮಾಡಿ ಮನವಿ ಆಲಿಸಿದರು ಹೌದು ಜಿಲ್ಲಾ ಉಸ್ತುವಾರಿ ಸಚಿವ ರಾದ ಆಚಾರ ಹಾಲಪ್ಪ ಬಸಪ್ಪ ಅವರು ಜಿಲ್ಲಾಧಿ ಕಾರಿಗಳ ಕಚೇರಿ ಆವರಣದಲ್ಲಿ ಧರಣಿ ನಿರತ ಕಬ್ಬು ಬೆಳೆಗಾರರನ್ನು ಭೇಟಿ ಮಾಡಿ ಮನವಿ ಸ್ವೀಕರಿಸಿದರು.
ನಂತರ ಅವರು ಮಾತನಾಡಿದ ಅವರು ಕಬ್ಬು ಬೆಳೆಗಾರರ ಸಮಸ್ಯೆಯನ್ನು ಮತ್ತು ಪ್ರಸಕ್ತ ಸಾಲಿಗೆ ಕಬ್ಬುದರ ನಿಗದಿ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಹಾಗೂ ಸಕ್ಕರೆ ಸಚಿವರೊಂದಿಗೆ ಚರ್ಚಿಸಿ ಪರಿಹರಿಸಲಾಗುವುದು ಎಂದು ತಿಳಿಸಿದರು
ಶಾಸಕ ಅಮೃತ ದೇಸಾಯಿ ಮಾತನಾಡಿ ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಸರ್ಕಾರದೊಂದಿಗೆ ಮಾನ್ಯ ಸಚಿವರ ಒಡಗೂಡಿ ಚರ್ಚಿಸಿ ದರ ನಿಗದಿ ಮಾಡುವಂತೆ ಕ್ರಮ ವಹಿಸಲಾಗುವುದೆಂದು ಎಂದು ಹೇಳಿದರು.
ಈ ಸಂದರ್ಭದಲ್ಲಿ ರೈತ ಮುಖಂಡ ಕುರುಬೂರು ಶಾಂತಕುಮಾರ ಮಾತನಾಡಿ ರೈತರ ಧರಣಿ ಹಾಗೂ ಬೇಡಿಕೆಗಳ ಕುರಿತು ಸಚಿವರ ಗಮನ ಸೆಳೆದರು ಮತ್ತು ಈ ಕುರಿತು ಮನವಿ ಸಲ್ಲಿಸಿದರು.
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ,ಪೊಲೀಸ್ ಆಯುಕ್ತ ಲಾಭೂರಾಮ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುರೇಶ ಇಟ್ನಾಳ,ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಲೋಕೇಶ್ ಜಗಲಾಸರ್,ಅಪರ ಜಿಲ್ಲಾಧಿ ಕಾರಿ ಶಿವಾನಂದ ಭಜಂತ್ರಿ,ಉಪ ಪೊಲೀಸ್ ಆಯುಕ್ತ ಸಾಹಿಲ್ ಬಾಗ್ಲಾ, ಡಾ.ಗೋಪಾಲ ಬ್ಯಾಕೋಡ, ಉಪವಿಭಾಗಾಧಿಕಾರಿ ಅಶೋಕ ತೇಲಿ, ಧಾರವಾಡ ತಹಶೀಲ್ದಾರ ಸಂತೋಷ ಹಿರೇಮಠ, ಸಹಾಯಕ ಪೊಲೀಸ್ ಆಯುಕ್ತ ವಿಜಯಕುಮಾರ ವಿ.ಟಿ. ಸೇರಿದಂತೆ ರೈತರು, ಇತರರು ಇದ್ದರು.