ಗಂಗಾವತಿ –
ಅರಣ್ಯ ಇಲಾಖೆಯ ಕಚೇರಿಯಲ್ಲೇ ಅಲ್ಲಿನ ಸಿಬ್ಬಂದಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳದ ಗಂಗಾವತಿ ಅರಣ್ಯ ವಲಯ ಇಲಾಖೆ ಕಚೇರಿಯಲ್ಲೇ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಸಿಬ್ಬಂದಿ.

ಕ್ಷೇಮಾಭಿವೃದ್ಧಿ ಯೋಜನೆಯಡಿಯಲ್ಲಿ ಇಲಾಖೆಯ ಕಾವಲುಗಾರನಾಗಿದ್ದ ಮಲ್ಲಿಕಾರ್ಜುನ ಆತ್ಮಹತ್ಯೆ ಮಾಡಿಕೊಂಡ ನೌಕರನಾಗಿದ್ದಾನೆ.ಇನ್ನೇನು ನಿವೃತ್ತಿಯ ಅಂಚಿನಲ್ಲಿದ್ದ ರಾತ್ರಿ ಕಾವಲುಗಾರ ನಿವೃತ್ತಿಯಾಗಿ ಕುಟುಂಬದ ಜೊತೆಯಲ್ಲಿ ನೆಮ್ಮದಿಯಾಗಿರಬೇಕಾಗಿದ್ದ ಮಲ್ಲಿಕಾರ್ಜುನ ಸಾವಿಗೆ ಶರಣಾಗಿದ್ದಾನೆ. ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದು ಗಂಗಾವತಿ ನಗರ ಪೋಲಿಸ್ ಠಾಣೆಯಲ್ಲಿ ಈ ಕುರಿತಂತೆ ಪ್ರಕರಣ ದಾಖಲಾಗಿದ್ದು ಮುಂದಿನ ಕ್ರಮವನ್ನು ಪೊಲೀಸರು ಕೈಗೊಂಡಿದ್ದಾರೆ.