ಬೆಂಗಳೂರು –
ಬಜೆಟ್ ನಲ್ಲಿ 7 ನೇ ವೇತನ ಆಯೋಗದ ಕಡೆ ಗಣನೆ ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ಕುರಿತು ಘೋಷಣೆ ಮಾಡದ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಹಾಗೆ ಮುಂದೇನು ಮಾಡ ಬೇಕು ಈ ಒಂದು ವಿಚಾರ ಕುರಿತು ಚರ್ಚೆ ಮಾಡುವ ನಿಟ್ಟಿನಲ್ಲಿ ರಾಜ್ಯದ ಸರ್ಕಾರಿ ನೌಕರರ ಸಂಘಟನೆ ಇಂದು ಮಹತ್ವದ ಸಭೆಯನ್ನು ಕರೆದಿದೆ.
ರಾಜ್ಯದ ಸರ್ಕಾರಿ ನೌಕರರ ಸಂಘಟನೆ ಈ ಒಂದು ಸಭೆಯನ್ನು ಆಹ್ವಾನ ಮಾಡಿದ್ದು ಹೀಗಾಗಿ ಸಭೆಯಲ್ಲಿ ಪಾಲ್ಗೊಳ್ಳಲು ರಾಜ್ಯದ ಮೂಲೆ ಮೂಲೆಗಳಿಂದ ಸರ್ಕಾರಿ ನೌಕರರು ಬೆಂಗಳೂರಿಗೆ ಆಗಮಿಸಿದ್ದಾರೆ.ಸಭೆ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ನೌಕರರು ಬೆಂಗಳೂರಿನತ್ತ ಮುಖ ಮಾಡಿದ್ದಾರೆ.
ರಾಜ್ಯದ ಮೂಲೆ ಮೂಲೆಗಳಿಂದ ಸರ್ಕಾರಿ ನೌಕರರ ಟೀಮ್ ನವರು ಬೆಂಗಳೂರಿಗೆ ಆಗಮಿಸಿ ಸಂಜೆ ನಡೆಯಲಿರುವ ಮಹತ್ವದ ಸಭೆಯಲ್ಲಿ ಪಾಲ್ಗೊಂಡು ಸಲಹೆ ಸೂಚನೆಗಳನ್ನು ನೀಡಿ ಮುಂದಿನ ಹೋರಾಟಕ್ಕೆ ಶಕ್ತಿಯನ್ನು ತುಂಬಲಿದ್ದಾರೆ.
ಸಂಜೆ 5 ಗಂಟೆಗೆ ಈ ಒಂದು ಮಹತ್ವದ ಸಭೆ ನಡೆಯಲಿದ್ದು ರಾಜ್ಯದ ಸಂಘಟನೆಯ ಸೂಚನೆ ಹಿನ್ನೆಲೆಯಲ್ಲಿ ಸಭೆಯಲ್ಲಿ ಪಾಲ್ಗೊಳ್ಳಲು ರಾಜ್ಯದ ಮೂಲೆ ಮೂಲೆಗಳಿಂದ ಈಗಾಗಲೇ ಆಗಮಿಸಿ ದ್ದಾರೆ.ಪ್ರಮುಖವಾಗಿ ಎರಡು ವಿಚಾರಗಳಾದ 7 ನೇ ವೇತನ ಆಯೋಗದೊಂದಿಗೆ ಹಾಗೆ ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿಗೆ ಒತ್ತಾಯಿಸಿ ಚರ್ಚೆ ನಡೆಯಲಿದೆ.ಪ್ರಮುಖ ವಾಗಿ ಮುಂದೆ ಯಾವ ನಿರ್ಧಾರವನ್ನು ತೆಗೆದುಕೊಳ್ಳ ಬೇಕು ಹೋರಾಟ ಹೇಗೆ ಇರಲಿದೆ ಎಂಬ ಕುರಿತು ಭವಿಷ್ಯ ನಿರ್ಧಾರವಾಗಲಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..