ಬೆಂಗಳೂರು –
ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಶಾಲೆಗಳ ಆರಂಭ ಸೇರಿದಂತೆ ಹಲವು ಮಹತ್ವದ ವಿಚಾರಗಳ ಕುರಿತು ಇಂದು ತೀರ್ಮಾನ ಆಗಲಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ಇಂದು ಮಧ್ಯಾಹ್ನ 1 ಗಂಟೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಯಲಿದ್ದು.ಸಚಿವರು,ಅಧಿಕಾರಿಗಳು, ತಜ್ಞರೊಂದಿಗೆ ಮುಖ್ಯಮಂತ್ರಿಗಳು ಸಮಾಲೋಚನೆ ನಡೆಸಲಿದ್ದಾರೆ.

ಕೊರೋನಾ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಯಲಿದ್ದು ಇದರೊಂದಿಗೆ ಇಂದು ರಾತ್ರಿಯಿಂದ ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ.ಮಧ್ಯಾಹ್ನದ ವೇಳೆಗೆ ಹೊಸ ಮಾರ್ಗಸೂಚಿ ಜಾರಿಯಾಗುವ ಸಾಧ್ಯತೆ ಯಿದೆ.ಇದರ ನಡುವೆ ಕಳೆದ ಮೂರು ನಾಲ್ಕು ದಿನಗಳಿಂದ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಕೈಬಿಡಬೇಕೆಂಬ ಒತ್ತಾಯ ತೀವ್ರವಾಗಿರುವ ಹಿನ್ನೆಲೆಯಲ್ಲಿ ಇಂದಿನ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ.ಜನಸಾಮಾನ್ಯರು ಭಯ ಪಡುವ ಅವಶ್ಯಕತೆ ಇಲ್ಲವೆಂದು ಗೃಹಸಚಿವರು ಈಗಾಗಲೇ ಹೇಳಿದ್ದು.ಇಂದಿನಿಂದ ವೀಕೆಂಡ್ ಕರ್ಫ್ಯೂ ಇರುವುದಿಲ್ಲ ವೆಂದು ಹೇಳಲಾಗಿದ್ದು ಹೀಗಾಗಿ ಸಿಎಂ ನಡೆಸುವ ಸಭೆ ಯತ್ತ ಎಲ್ಲರ ಚಿತ್ತ ನೆಟ್ಟಿದೆ