ಬೆಂಗಳೂರು –
ಕೋವಿಡ್ ಕಾರಣಕ್ಕೆ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ತರಗತಿಗಳು ನಡೆಯದ ಕಾರಣ ಈ ಅವಧಿ ಯಲ್ಲಿನ ಆಹಾರ ಧಾನ್ಯಗಳನ್ನು ವಿದ್ಯಾರ್ಥಿಗಳಿಗೆ ವಿತರಿಸು ವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.1 ರಿಂದ 10ನೇ ತರಗತಿಯ ಸರ್ಕಾರಿ ಮತ್ತು ಅನುದಾನಿತ ಪ್ರಾಥ ಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಆಹಾರ ಧಾನ್ಯಗಳನ್ನು ವಿತರಿಸುವಂತೆ ಸೂಚಿಸಲಾಗಿದೆ.
ಬಿಸಿಯೂಟದ ಬದಲಿಗೆ ಆಹಾರ ಭದ್ರತಾ ಕಾಯ್ದೆ- 2013 ಮತ್ತು ಮಧ್ಯಾಹ್ನ ಉಪಾಹಾರ ಯೋಜನೆ ನಿಯಮಗಳು- 2015ರ ಅನ್ವಯ ಈ ಕ್ರಮಕೈಗೊಳ್ಳುವಂತೆ ಶಾಲೆಯ ಶಿಕ್ಷಕ ರಿಗೆ ಉಲ್ಲೇಖ ವನ್ನು ಮಾಡಿ ಸೂಚಿಸಲಾಗಿದೆ.
ಸೆಪ್ಟೆಂಬರ್ ತಿಂಗಳಲ್ಲಿ 25 ದಿನಗಳು ಮತ್ತು ಅಕ್ಟೋಬರ್ ತಿಂಗಳಲ್ಲಿ 16 ದಿನಗಳ ಆಹಾರ ಧಾನ್ಯಗಳ ವಿತರಿಸಬೇಕು ಎಂದು ತಿಳಿಸಲಾಗಿದೆ.