ಬೆಂಗಳೂರು –
ರಾಜ್ಯ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘ’ದ ಸದಸ್ಯತ್ವ ಶುಲ್ಕ ಕಟಾವಣೆ ಕುರಿತು ‘ಶಿಕ್ಷಣ ಇಲಾಖೆ’ ಮಹತ್ವದ ಆದೇಶವನ್ನು ಮಾಡಿದೆ ಹೌದು ರಾಜ್ಯ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಸದಸ್ಯತ್ವ ಶುಲ್ಕ ಕಟಾವಣೆ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯ (6-8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘ(ರಿ), ಬೆಂಗಳೂರು ಈ ಸಂಘದ ಸದಸ್ಯತ್ವ ಶುಲ್ಕವನ್ನು ಸರ್ಕಾರದ ಉಲ್ಲೇಖ-1 ಮತ್ತು 2ರ ಆದೇಶಗಳಲ್ಲಿ ತಿಳಿಸಿರುವಂತೆ 2024-25ನೇ ಸಾಲಿಗೆ 2024ರ ಡಿಸೆಂಬರ್ ತಿಂಗಳ ವೇತನದಿಂದ ಹಾಗೂ ಮುಂಬರುವ ವರ್ಷಗಳಲ್ಲಿ ಪ್ರತಿ ಏಪ್ರಿಲ್ ತಿಂಗಳ ವೇತನದಿಂದ ಕಟಾವಣೆ ಮಾಡಲು ನಿಯಮಾನುಸಾರ ಅಗತ್ಯ ಕ್ರಮ ಗಳನ್ನು ವಹಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಸಂಬಂಧಿಸಿದ ಎಲ್ಲಾ ಅಧಿಕಾರಿಗಳಿಗೆ ತಿಳಿಸ ಲಾಗಿದೆ ಹಾಗೂ ಸಂಬಂಧಿಸಿದ ಇಲಾಖೆಗಳ ಎಲ್ಲಾ ಅಧಿಕಾರಿಗಳನ್ನು ಕೋರಲಾಗಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..