ಗೌರಿ ಗಣೇಶ ಹಬ್ಬಕ್ಕೆ ರಾಜ್ಯ ಸರ್ಕಾರದಿಂದ ಸೂಚನೆ ಗಳು ಪ್ರಕಟ – ಅನುಮತಿ ನೀಡಲು ವ್ಯವಸ್ಥೆ ಜಾರಿ ಮಾಡಿ ಆದೇಶ…..

Suddi Sante Desk

ಬೆಂಗಳೂರು –

ರಾಜ್ಯ ಸರ್ಕಾರದಿಂದ ಗೌರಿ ಗಣೇಶ ಚತುರ್ಥಿ ಹಬ್ಬದ ಹಿನ್ನಲೆಯಲ್ಲಿ ವಿವಿಧ ಇಲಾಖೆಗಳ ಸಮನ್ವಯಕ್ಕಾಗಿ ಸೂಚನೆಗಳನ್ನು ಹೊರಡಿಸಿದೆ.ಅಲ್ಲದೇ ಗಣೇಶ ಹಬ್ಬ ಆಚರಣೆಗೆ ಆಯೋಜಕರಿಗೆ ಅನುಮತಿ ನೀಡಲು ಏಕ ಗವಾಕ್ಷಿ ವ್ಯವಸ್ಥೆ ಜಾರಿಗೊಳಿಸಿ ಆದೇಶ ಹೊರಡಿಸಿದೆ.

ಈ ಕುರಿತಂತೆ ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯೆಲ್ ಸುತ್ತೋಲೆ ಹೊರಡಿಸಿದ್ದು ದಿನಾಂಕ 30-08-2022ರಿಂದ ಗೌರಿ ಗಣೇಶ ಹಬ್ಬವನ್ನು ರಾಜ್ಯದಲ್ಲಿ ಸಂಭ್ರಮದಿಂದ ಆಚರಿಸಲಾಗು ತ್ತಿದೆ.ಹೀಗಾಗಿ ಸೂಕ್ತವಾಗಿ ಜವಾಬ್ದಾರಿ ಯಿಂದ ಪರಿಶೀಲನೆ ನಡೆಸಿ ಅನುಮತಿ ನೀಡಲು ಸೂಚನೆ ನೀಡಲಾಗಿದೆ

ಗಣೇಶ ಮೂರ್ತಿ ಪ್ರತಿಷ್ಠಾಪನೆಯ ವೇಳೆ ಆಯೋಜಿಸುವ ಅಯೋಜಕರಿಗೆ ಪರವಾನಿಗೆ ನೀಡುವುದು ವಿವಿಧ ಇಲಾಖೆ ಗಳ ಬಹುದೊಡ್ಡ ಜವಾಬ್ದಾರಿಯಾಗಿರುತ್ತದೆ.ಈ ಕಾರ್ಯ ವನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಈ ಕೆಳ ಕಂಡಂತೆ ಕ್ರಮ ವಹಿಸಲು ಸೂಚಿಸಲಾಗಿದೆ

  • ಗಣೇಶ ಪ್ರತಿಷ್ಠಾಪನೆಗೆ ಅಗತ್ಯವಿರುವ ಸ್ಥಳ, ಪೆಂಡಾಲ್ ವಿದ್ಯುತ್ ಸಂಪರ್ಕದ ಪರವಾನಗಿಯನ್ನು ನೀಡಲು ಕಂದಾಯ,ಲೋಕೋಪಯೋಗಿ,ಇಂಧನ, ಅಗ್ನಿಶಾಮಕ ಮತ್ತು ಪೊಲೀಸ್ ಇಲಾಖೆಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಸಂಯೋಜಿತವಾಗಿ ಗಣೇಶ ವಿಗ್ರಹ ಸ್ಥಾಪನೆಗೆ ಅಗತ್ಯವಿರುವ ಪರವಾನಗಿ ಯನ್ನು ಏಕಗವಾಕ್ಷಿ ಅಡಿಯಲ್ಲಿ ನೀಡಲು ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದೆ.
  • ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಪ್ರತಿ ವಾರ್ಡ್ ಗಳ ಮಟ್ಟದಲ್ಲಿ ಸಂಬಂಧಿಸಿದ ವಿವಿಧ ಇಲಾಖೆಗಳ ಪ್ರತಿ ನಿಧಿಗಳನ್ನು ಒಳಗೊಂಡಂತೆ ಏಕ ಗವಾಕ್ಷಿ ವ್ಯವಸ್ಥೆ ಯನ್ನು ಸ್ಥಾಪಿಸಿ,ಪ್ರಚುರ ಪಡಿಸುವುದು
  • ಕಾರ್ಯಕ್ರಮದ ಆಯೋಜಕರು ನಿಗದಿತ ನಮೂನೆ ಯಲ್ಲಿ ಮುಂಚಿತವಾಗಿ ಅರ್ಜಿ ಸಲ್ಲಿಸುವುದು ಹಾಗೂ ಆಯೋಜಕರು ಸಲ್ಲಿಸುವ ಅರ್ಜಿಗಳನ್ನು ಸಂಬಂಧಿ ಸಿದ ಇಲಾಖೆಗಳು ಜಂಟಿ ತಪಾಸಣೆ ಮಾಡಿ ಮೂರು ದಿನಗಳೊಳಗಾಗಿ ನಿಯಮಾನುಸಾರ ಪರವಾನಗಿ ನೀಡಲು ಕ್ರಮ ಕೈಗೊಳ್ಳುವುದು.
  • ಪರವಾನಗಿ ನೀಡುವ ಮುನ್ನ ಆಯೋಜಕರಿಂದ ಕಾಲಕಾಲಕ್ಕೆ ನ್ಯಾಯಲಾಯದ ನಿರ್ದೇಶನಗಳನ್ನು ಹಾಗೂ ಸರ್ಕಾರದ ವಿವಿಧ ಇಲಾಖೆಗಳಿಂದ ನೀಡಿರುವ ಸೂಚನೆಗಳನ್ನು ಪಾಲಿಸುವ ಬಗ್ಗೆ ಮುಚ್ಚಳಿಕೆಯನ್ನು ಪಡೆಯವುದು.
  • ಸಾರ್ವಜನಿಕ ಸುರಕ್ಷಿತ ಹಾಗೂ ಪರಿಸರ ಮಾಲಿನ್ಯ ಉಂಟಾಗದ ರೀತಿಯಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವ ಬಗ್ಗೆ ಆಯೋಜಕರಿಂದ ಖಾತರಿಪ ಡಿಸಿಕೊಳ್ಳುವುದು.
  • ಅಗತ್ಯವಿರುವ ಕಡೆ ಸಿಸಿ ಕ್ಯಾಮರಾಗಳನ್ನು ಅಳವಡಿ ಸುವಂತೆ ಆಯೋಜಕರಿಗೆ ಸೂಚಿಸುವುದು
  • ವಿಶೇಷವಾಗಿ ಹೈ-ಟೆನ್ಷನ್ ತಂತಿ ಹಾದು ಹೋಗಿರುವ ಪ್ರದೇಶದಲ್ಲಿ ಯಾವುದೇ ಕಾರಣಕ್ಕೂ ಗಣೇಶ ಮೂರ್ತಿಯನ್ನು ಸ್ಥಾಪಿಸಲು ಅನುಮತಿ ನೀಡದಿ ರುವುದು.
  • ಉತ್ಸವಕ್ಕೆ ಮುಂಚಿತವಾಗಿ ನಾಗರಿಕ ಸಮಿತಿ, ಮೊಹಲ್ಲಾ ಸಮಿತಿ, ಕಾವಲು ಸಮಿತಿ ಮತ್ತಿತರ ಎಲ್ಲಾ ಸಂಘಸಂಸ್ಥೆಗಳ ಮುಖ್ಯಸ್ಥರನ್ನು ಒಳಗೊಂಡಂತೆ ಕೋಮು ಸೌಹಾರ್ಧ ಸಭೆಗಳನ್ನು ಆಯೋಜಿಸುವಂತೆ ಕ್ರಮ ವಹಿಸಲು, ಕಟ್ಟು ನಿಟ್ಟಾಗಿ ಪಾಲಿಸಲು ತಿಳಿಸಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.