ಲೆಕ್ಕಕ್ಕೆ ಸಿಗದ ಕೊರೊನಾ ಸೊಂಕಿತರ ಸಂಖ್ಯೆ – ಒಂದು ವಾರ ಲಾಕ್ ಡೌನ್ ಘೋಷಣೆ

Suddi Sante Desk

ಮುಂಬೈ –

ಎರಡನೇಯ ಹಂತದ ಕೊರೊನಾ ಅಲೆಯಿಂದ ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಮರಾವತಿ ಜಿಲ್ಲೆಯಲ್ಲಿ ಒಂದು ವಾರ ಲಾಕ್ ಡೌನ್ ಜಾರಿ ಮಾಡಲು ಸರ್ಕಾರ ನಿರ್ಧರಿಸಿದೆ.

ಈ ಹಿಂದೆ ಜಿಲ್ಲಾಡಳಿತ ಅಮರಾವತಿಯಲ್ಲಿ ವಾರಾಂತ್ಯ ಲಾಕ್ ಡೌನ್ ಘೋಷಿಸಿತ್ತು. ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆಯವರೆಗೆ ಲಾಕ್ ಡೌನ್ ಘೋಷಿಸಲಾಗಿದ್ದು, ಅದನ್ನು ಒಂದು ವಾರದವರೆಗೆ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ.

ಸಚಿವೆ ಯಶೋಮತಿ ಠಾಕೂರ್ ಈ ನಿರ್ಧಾರ ಪ್ರಕಟಿಸಿದ್ದಾರೆ. ಅಚಲ್ ನಗರವನ್ನು ಹೊರತುಪಡಿಸಿ ಅಮರಾವತಿ ಜಿಲ್ಲೆಯಲ್ಲಿ ಲಾಕ್ಡೌನ್ ಜಾರಿಯಲ್ಲಿ ರುತ್ತದೆ ಎಂದು ಅವರು ತಿಳಿಸಿದ್ದಾರೆ. ಲಾಕ್ ಡೌನ್ ಮಹಾರಾಷ್ಟ್ರದಲ್ಲಿ ಸತತ ಎರಡನೇ ದಿನ 6000ಕ್ಕೂ ಹೆಚ್ಚು ಹೊಸ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ. ಅವಧಿಯಲ್ಲಿ ಅಗತ್ಯ ಸೇವೆಗಳಿಗೆ ಅನುಮತಿ ಇರುತ್ತದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.