ಬೆಂಗಳೂರು –
ಕೇಂದ್ರ ಸರ್ಕಾರದ ಮಾದರಿಯ ವೇತನ ವಿಚಾರ ಕುರಿತು ರಾಜ್ಯ ಸರ್ಕಾರದ ಮುಂದೆ ಯಾವುದೇ ಪ್ರಸ್ತಾಪವು ಇಲ್ಲ ಎಂದು ವಿಧಾನ ಸಭೆಯಲ್ಲಿ ಹೇಳಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಗ ಮತ್ತೊಂದು ಹೇಳಿದ್ದಾರೆ ಹೌದು ಮೊನ್ನೆ ಮೊನ್ನೆಯಷ್ಟೇ ಬಜೆಟ್ ನಲ್ಲಿ ತೀವ್ರ ನಿರಾಸೆ ಯನ್ನುಂಟು ಮಾಡಿದ ಬಸವರಾಜ ಬೊಮ್ಮಾಯಿ ಅವರು ಈಗ ಮತ್ತೊಂದು ನಿರೀಕ್ಷೆಯಲ್ಲಿದ್ದ ರಾಜ್ಯದ ಸರ್ಕಾರಿ ನೌಕರರಿಗೆ ಶಾಕ್ ನೀಡಿದ್ದಾರೆ
ಹೌದು ಪ್ರಶ್ನೋತ್ತರದ ಅವಧಿಯಲ್ಲಿ ವಿಧಾನ ಪರಿಷತ್ ನಲ್ಲಿ ಪದವೀಧರ ಕ್ಷೇತ್ರದಿಂದ ಆಯ್ಕೆಯಾದ ಸದಸ್ಯ ರಾದ ಶ್ರೀಕಂಠೆಗೌಡ ಅವರು NPS ವಿಚಾರ ಕುರಿತು ಕೆಲವು ಪ್ರಶ್ನೆ ಗಳನ್ನು ಕೇಳಿದರು.ಇವರ ಪ್ರಶ್ನೆ ಗಳಿಗೆ ಉತ್ತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರದ ಮುಂದೆ ರಾಜ್ಯ ದಲ್ಲಿ ಹಳೆಯ ಪಿಂಚಣಿ ಯೋಜನೆ ಯನ್ನು ಜಾರಿಗೆ ತರುವ ಯಾವುದೇ ಪ್ರಸ್ತಾಪವು ಇಲ್ಲ ಎಂದು ಉತ್ತರ ನೀಡಿದರು
ಇದರೊಂದಿಗೆ ಮತ್ತೊಂದು ಶಾಕಿಂಗ್ ಸುದ್ದಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಸರ್ಕಾರಿ ನೌಕರರಿಗೆ ನೀಡಿದ್ದು ಇದರಿಂದಾಗಿ ರಾಜ್ಯ ಸರ್ಕಾರದ ನೌಕರರು ಮುಂದೇನು ಮಾಡತಾರೆ ಎಂಬೊಂದನ್ನು ಕಾದು ನೋಡಬೇಕಿದೆ.