ಹೈದರಾಬಾದ್ –
ಅದ್ಯಾಕೋ ಏನೋ ಕೋವಿಡ್ ಲಸಿಕೆಯಿಂದ ಸಾವುಗಳ ಸಂಖ್ಯೆ ಕಂಡು ಬರುತ್ತಿವೆ. ಅಲ್ಲಲ್ಲಿ ಕೆಲವು ಪ್ರಕರಣಗಳು ಕಂಡು ಬರುತ್ತಿದ್ದು ಇದಕ್ಕೆ ಮತ್ತೊಂದು ಉದಾಹರಣೆ ವಾರದ ಹಿಂದೆಯಷ್ಟೇ ಕೋವಿಡ್ ಲಸಿಕೆಯನ್ನು ಹಾಕಿಸಿಕೊಂಡಿದ್ದ ತೆಲಂಗಾಣದ ವಾರಂಗಲ್ ಜಿಲ್ಲೆಯ 45 ವರ್ಷದ ಅಂಗನವಾಡಿ ಶಿಕ್ಷಕಿ ಸಾವು. ಆದರೆ ಇವರು ಎದೆನೋವಿನಿಂದ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ವಾರಂಗಲ್‌ನ ಶ್ಯಾಮ್ ಪೇಟೆಯ ಶಿಕ್ಷಕಿ ಜನವರಿ 19ರಂದು ಲಸಿಕೆ ಹಾಕಿಸಿಕೊಂಡಿದ್ದರು.ಶನಿವಾರ ಕೆಲವು ಔಷಧಿಗಳನ್ನು ಪಡೆದಿದ್ದಾರೆ. ಬಳಿಕ ಎದೆನೋವು ಕಾಣಿಸಿಕೊಂಡಿದ್ದರಿಂದ ಮಲಗಿದ್ದಾರೆ. ಆದರೆ, ಭಾನುವಾರ ಬೆಳಗ್ಗೆ ಅವರು ಮೃತಪಟ್ಟಿ ರುವುದು ಈಗ ಬೆಳಕಿಗೆ ಬಂದಿದೆ.
ಶಿಕ್ಷಕಿಯ ಮೃತದೇಹವನ್ನು ಈಗಾಗಲೇ ಮರಣೋತ್ತರ ಪರೀಕ್ಷೆಗೆ ಮಹಾತ್ಮಾ ಗಾಂಧಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಸಾವಿನ ಕಾರಣ ಪತ್ತೆಗೆ ಪ್ರಯೋಗಾಲಯ ಮಾದರಿ ಸಂಗ್ರಹಿಸಲಾಗಿದೆ ಎಂದು ಆಸ್ಪತ್ರೆ ಮುಖ್ಯಸ್ಥ ನಾಗಾರ್ಜುನ ರೆಡ್ಡಿ ಹೇಳಿದ್ದಾರೆ.
ತೆಲಂಗಾಣ ರಾಜ್ಯದಲ್ಲಿ ಕೋವಿಡ್ ಲಸಿಕೆ ಪಡೆದು ಎದೆನೋವು ಕಾಣಿಸಿಕೊಂಡು ಮೃತಪಟ್ಟ ಎರಡನೇ ಮಹಿಳೆಯಾಗಿದ್ದು, ನಿರ್ಮಲ್ ಜಿಲ್ಲೆಯ 42 ವರ್ಷದ ಆರೋಗ್ಯ ಕಾರ್ಯಕರ್ತರೊಬ್ಬರು ಲಸಿಕೆ ಪಡೆದ ಬಳಿಕ ಎದೆನೋವು ಕಾಣಿಸಿಕೊಂಡು ಮೃತಪಟ್ಟಿದ್ದರು. ಆದರೆ, ಪ್ರಾಥಮಿಕ ಪರೀಕ್ಷೆಯಲ್ಲಿ ಸಾವಿಗೂ ಲಸಿಕೆಗೂ ಸಂಬಂಧವಿಲ್ಲ ಎಂದು ತಿಳಿದುಬಂದಿದ್ದು ಈಗ ಮತ್ತೊಬ್ಬರು ಸಾವಿಗೀಡಾಗಿದ್ದಾರೆ.