ಬೆಂಗಳೂರು –
ಕರ್ನಾಟಕ ವಿಧಾನ ಪರಿಷತ್ತಿನ ಮೂರು ಪದವೀಧರರ ಕ್ಷೇತ್ರ ಹಾಗೂ ಎರಡು ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿ ಪಕ್ಷವು ಅಭ್ಯರ್ಥಿ ಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಇತ್ತ ಕಾಂಗ್ರೆಸ್ ಪಕ್ಷವು ಅಭ್ಯರ್ಥಿ ಗಳನ್ನು ಘೋಷಣೆ ಮಾಡಿದೆ ಹೌದು
ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ನಂತರ ಇದೀಗ ಕಾಂಗ್ರೆಸ್ ಕೂಡ ಆರೂ ಕ್ಷೇತ್ರ ಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ ಕಾಂಗ್ರೆಸ್ ಈ ಹಿಂದೆ ಐದು ಕ್ಷೇತ್ರಗಳಿಗೆ ಅಭ್ಯರ್ಥಿ ಗಳ ಹೆಸರು ಘೋಷಿಸಿ ಒಂದು ಕ್ಷೇತ್ರವನ್ನು ಬಾಕಿ ಉಳಿಸಿಕೊಂಡಿತ್ತು.
ಇದೀಗ ಬಾಕಿ ಉಳಿದಿದ್ದ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಪಕ್ಷದ ಅಭ್ಯರ್ಥಿಯಾಗಿ ಮರಿತಿಬ್ಬೇಗೌಡ ಅವರನ್ನು ಆಯ್ಕೆ ಮಾಡುವ ಮೂಲಕ ವಿಧಾನ ಪರಿಷತ್ನ ಆರೂ ಸ್ಥಾನಗಳಿಗೆ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.
ನೈಋತ್ಯ ಶಿಕ್ಷಕರ ಕ್ಷೇತ್ರ ಕೆ.ಕೆ ಮಂಜುನಾಥ್ ಕಣಕ್ಕೆ ಇಳಿಯಲಿದ್ದು, ದಕ್ಷಿಣ ಶಿಕ್ಷಕರ ಕ್ಷೇತ್ರ ಮರತಿಬ್ಬೇಗೌಡ ಅವರು ಸ್ಪರ್ಧೆಸಲಿದ್ದಾರೆ. ಅದೇ ರೀತಿಯಾಗಿ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಡಿ.ಟಿ.ಶ್ರೀನಿವಾಸ್ ಕಣಕ್ಕೆ ಇಳಿಯಲಿದ್ದಾರೆ.ಇನ್ನು ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಡಾ.ಚಂದ್ರಶೇಖರ ಪಾಟೀಲ, ಅಲ್ಲದೆ ನೈಋತ್ಯ ಪದವೀಧರ ಕ್ಷೇತ್ರಕ್ಕೆ ಆಯನೂರು ಮಂಜುನಾಥ್ ಹಾಗೂ ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ರಾಮೋಜಿ ಗೌಡ ಅವರು ಸ್ಪರ್ಧಿಸಲಿದ್ದಾರೆ.
ಇನ್ನು ಪದವೀಧರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆ ವೇಳಾಪಟ್ಟಿ ನಾಮಪತ್ರ ಸಲ್ಲಿಕೆಗೆ ಕೊನೇ ದಿನಾಂಕ ಮೇ 16 ಆಗಿದ್ದು, ಮೇ 17 ಕ್ಕೆ ನಾಮಪತ್ರ ಪರಿಶೀಲನೆ ನಡೆಯಲಿದೆ. ಅದೇ ರೀತಿ ನಾಮಪತ್ರ ಹಿಂಪಡೆಯಲು ಕೊನೇ ದಿನಾಂಕ ಮೇ 20 ಇದ್ದು, ಜೂನ್ 3ಕ್ಕೆ ಮತದಾನ ನಡೆಯಲಿದೆ. ಜೂನ್ 6 ರಂದು ಮತ ಎಣಿಕೆ ನಡೆಯಲಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..